ರಾಜಕೀಯ

ಉಪ ಚುನಾವಣೆ: ರಾಮಚಂದ್ರ ಜಾಧವ್, ಚಿಕ್ಕನಗೌಡರ್ ಗೆ ಬಿಜೆಪಿ ಟಿಕೆಟ್ ಬಹುತೇಕ ಅಂತಿಮ

Lingaraj Badiger
ಬೆಂಗಳೂರು: ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಎರಡು ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯ ಕಾವು ಏರುತ್ತಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮವಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಸಂಬಂಧಿ, ಎಸ್ಐ ಚಿಕ್ಕನಗೌಡರ್ ಹಾಗೂ ಚಿಂಚೋಳಿ ಕ್ಷೇತ್ರಕ್ಕೆ ಡಾ. ಉಮೇಶ್ ಜಾಧವ್ ಅವರ ಸಹೋದರ ರಾಮಚಂದ್ರ ಜಾಧವ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.
ರಾಜ್ಯ ಬಿಜೆಪಿ ಒಂದು ಕ್ಷೇತ್ರಕ್ಕೆ ಒಂದೇ ಹೆಸರನ್ನು ಶಿಫಾರಸು ಮಾಡಿರುವುದರಿಂದ ಅಭ್ಯರ್ಥಿಗಳ ಬಹುತೇಕ ಅಂತಿಮ ಎನ್ನಲಾಗುತ್ತಿದೆ.
ಕುಟುಂಬ ರಾಜಕಾರಣವನ್ನು ವಿರೋಧಿಸಿ ಕಾಂಗ್ರೆಸ್ಸಿನಿಂದ ಬಿಜೆಪಿಗೆ ಜಿಗಿದ ನಾಯಕ ಇದೀಗ ಉಪಚುನಾವಣೆಯಲ್ಲಿ ತಮ್ಮ ಮಗನಿಗೆ ಟಿಕೆಟ್ ಕೊಡಿ ಎಂದು ಬಿಜೆಪಿ ನಾಯಕರ ಮುಂದೆ ಲಾಬಿ ಮಾಡುತ್ತಿದ್ದಾರೆ.
ಇತ್ತೀಚಿಗಷ್ಟೇ ಕುಟುಂಬ ರಾಜಕಾರಣ ವಿರೋಧಿಸಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಅವರು, ತಮ್ಮ ಮಗನಿಗೆ ಟಿಕೆಟ್ ಕೊಡಿಸಲು ಬಿಜೆಪಿ ನಾಯಕರ ಮುಂದೆ ಭಾರೀ ಲಾಬಿ ನಡೆಸಿದ್ದರು. 
ಉಪ ಚುನಾವಣೆಯಲ್ಲಿ ನನ್ನ ಮಗನಿಗೆ ಟಿಕೆಟ್ ಕೊಡಿ, ನನ್ನ ಮಗನಿಗೆ ಟಿಕೆಟ್ ಕೊಡದಿದ್ದರೆ ಪತ್ನಿಗೆ ಕೊಡಿ, ಇಲ್ಲದಿದ್ದರೆ ನನ್ನ ಸಹೋದರನಿಗಾದರೂ ಟಿಕೆಟ್ ಕೊಡಿ ಅಥವಾ ನನ್ನ ಸಂಬಂಧಿಗಾದರೂ ಟಿಕೆಟ್ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ಅಂತಿಮವಾಗಿ ಅವರ ಸಹೋದರನಿಗೆ ಬಿಜೆಪಿ ಟಿಕೆಟ್ ನೀಡಿದೆ.
SCROLL FOR NEXT