ರಾಜಕೀಯ

ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ: ಮತ್ತೆ ಮೈತ್ರಿ ಸರ್ಕಾರಕ್ಕೆ ಅತಂತ್ರದ ಭೀತಿ?

Sumana Upadhyaya
ಬೆಂಗಳೂರು/ಬೆಳಗಾವಿ: ಲೋಕಸಭೆ ಚುನಾವಣೆಗೆ ಮತದಾನ ಮುಗಿದ 48 ಗಂಟೆಗಳಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ ಮತ್ತೆ ಡೋಲಾಯಮಾನವಾಗುವ ಹಂತಕ್ಕೆ ಬಂದು ತಲುಪಿದೆ ಅದಕ್ಕೆ ಕಾರಣ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಹೇಳಿಕೆ.
ನಿನ್ನೆ ನಡೆದ ಹೊಸ ರಾಜಕೀಯ ಬೆಳವಣಿಗೆಯಲ್ಲಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಮತ್ತು ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೆ ಪಿ ನಗರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಜಾರಕಿಹೊಳಿ ಬಿಕ್ಕಟ್ಟಿನ ಬಗ್ಗೆ ಕಾಂಗ್ರೆಸ್ ನ ಹಿರಿಯ ನಾಯಕರು ರಾಜ್ಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿದ್ದಾರೆ.
ಸಭೆಯ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಮೇಶ್ ಜಾರಕಿಹೊಳಿಯವರ ರಕ್ತದಲ್ಲಿ ಮತ್ತು ಡಿಎನ್ಎಯಲ್ಲಿ ಕಾಂಗ್ರೆಸ್ ಇದೆ. ಕಾಂಗ್ರೆಸ್ ಅವರಿಗೆ ಯಾವುದೇ ಅನ್ಯಾಯ ಮಾಡಿಲ್ಲ. ಬೇರೆ ನೋವಿನಿಂದ ಅವರು ಅಸಂತೋಷಗೊಂಡಿದ್ದಾರೆ. ಬೇರೆ ಯಾವ ನೋವು ಅವರಲ್ಲಿದೆ ಎಂದು ಅವರು ಹೇಳಿಲ್ಲ ಎಂದಾಗ ಅದೇನು ಎಂದು ಸುದ್ದಿಗಾರರು ಕೇಳಿದ್ದಕ್ಕೆ ಬೇರೆ ಪ್ರಶ್ನೆ ಕೇಳಿ ಎಂದರು.
ತಾವು ಏನೋ ಕಳೆದುಕೊಂಡಿದ್ದೇವೆ ಎಂಬ ನೋವು ರಮೇಶ್ ರನ್ನು ಕಾಡುತ್ತಿದೆ ಎಂದು ಅವರ ಸೋದರ ಅರಣ್ಯ ಖಾತೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
SCROLL FOR NEXT