ರಾಜಕೀಯ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 14 ಅನರ್ಹ ಶಾಸಕರಿಂದ ಸುಪ್ರೀಂಗೆ ಅರ್ಜಿ

Lingaraj Badiger
ನವದೆಹಲಿ: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ 14 ಅನರ್ಹ ಶಾಸಕರು ತಮ್ಮನ್ನು ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ ಗುರುವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸ್ಪೀಕರ್ ಆದೇಶ ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್-ಜೆಡಿಎಸ್ ನ 14 ಅನರ್ಹ ಶಾಸಕರು ಇಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೇ ಗೋಕಾಕ್, ಅಥಣಿ ಮತ್ತು ರಾಣೆಬೆನ್ನೂರಿನ ಅನರ್ಹ ಶಾಸಕರಾದ  ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಆರ್. ಶಂಕರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇನ್ನುಳಿದ 14 ಅನರ್ಹರು ಕೂಡಾ ಇಂದು ಸರ್ವೋಚ್ಛ ನ್ಯಾಯಲಯದ ಕದ ತಟ್ಟಿದ್ದಾರೆ.
ಜೆಡಿಎಸ್ ನ ಎಚ್ ವಿಶ್ವನಾಥ್, ಕೆ ಗೋಪಾಲಯ್ಯ ಹಾಗೂ ನಾರಾಯಣಗೌಡ ಅವರು ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ ಜಂಟಿಯಾಗಿ ಅರ್ಜಿ ಸಲ್ಲಿಸಿದ್ದಾರೆ. 
ಇನ್ನು ಕಾಂಗ್ರೆಸ್ ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಪ್ರತಾಪಗೌಡ ಪಾಟೀಲ, ಎಂಟಿಬಿ ನಾಗರಾಜ್, ಕೆ.ಸುಧಾಕರ, ಭೈರತಿ ಬಸವರಾಜು, ಎಸ್.ಟಿ.ಸೋಮಶೇಖರ್, ಮುನಿರತ್ನ, ಶ್ರೀಮಂತ ಪಾಟೀಲ್, ರೋಷನ್ ಬೇಗ್, ಆನಂದ್ ಸಿಂಗ್, ಶಿವರಾಮ್ ಹೆಬ್ಬಾರ್ ಅವರು ಸ್ಪೀಕರ್ ನಿರ್ಣಯದ ವಿರುದ್ಧ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
SCROLL FOR NEXT