ಆರ್. ಅಶೋಕ್ 
ರಾಜಕೀಯ

ಮಾಜಿ ಡಿಸಿಎಂ ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪತ್ರ : ಲೆಟರ್ ಬಗ್ಗೆ ಆರ್. ಅಶೋಕ್ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡಿದ್ದ ಆರ್.ಅಶೋಕ್​ಅವರ ಕಾರ್ಯಕ್ಕೆ ...

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನಾ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಆಯೋಜನೆ ಸೇರಿದಂತೆ ಎಲ್ಲ ಕೆಲಸಗಳಲ್ಲೂ ತೊಡಗಿಕೊಂಡಿದ್ದ ಆರ್.ಅಶೋಕ್​ಅವರ ಕಾರ್ಯಕ್ಕೆ ಶಾ ವಿಶೇಷ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಚುನಾವಣೆ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಶ್ಲಾಘಿಸಿ ಪಕ್ಷದ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ನಮಗೆ ಅಭಿನಂದನಾ ಪತ್ರ ಕಳುಹಿಸಿರುವುದು ಹರ್ಷ ತಂದಿದೆ. ಈ ಅಭಿನಂದನೆ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು 
ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಅಮಿತ್ ಶಾ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಸದ್ಯ ಈ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಆರ್.ಅಶೋಕ್ ಅವರು, ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದು ಪ್ರತಿಕ್ರಿಯೆ ನೀಡಿದ್ದು ಈ ವಿಷಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!