ಚಿನ್ನ ಜೀಯರ್ ಸ್ವಾಮೀಜಿ ಭೇಟಿಯಾದ ಸಿಎಂ ಯಡಿಯೂರಪ್ಪ 
ರಾಜಕೀಯ

ಹೈದರಾಬಾದ್ ನಲ್ಲಿ ಚಿನ್ನ ಜೀಯರ್ ಸ್ವಾಮೀಜಿ ಭೇಟಿಯಾದ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ತೆಲಂಗಾಣದ ಪ್ರಸಿದ್ಧ ಚಿನ್ನ ಜೀಯರ್ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ತೆಲಂಗಾಣದ ಪ್ರಸಿದ್ಧ ಚಿನ್ನ ಜೀಯರ್ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಪುತ್ರ ಬಿ ವೈ ವಿಜಯೇಂದ್ರ ಜೊತೆ ಹೈದರಾಬಾದ್ ನ ಶಂಶಾಬಾದ್​ಗೆ ತೆರಳಿ ಅಲ್ಲಿ ಚಿನ್ನ ಜೀಯರ್ ಸ್ವಾಮೀಜಿಯನ್ನು ಭೇಟಿ ಮಾಡಿದರು.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಬಳಿಕ ಭೇಟಿ ನೀಡುತ್ತಿರುವ ಎರಡನೇ ಸ್ವಾಮೀಜಿ ಇವರಾಗಿದ್ದಾರೆ. ಇದಕ್ಕೂ ಮೊದಲು ಅವರು ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿದ್ದರು.
ಮೇಲುಕೋಟೆಯಲ್ಲಿರುವ ಸ್ವಾಮೀಜಿಗಳ ಸಲಹೆ ಮೇರೆಗೆ ಯಡಿಯೂರಪ್ಪ ಅವರು ಚಿನ್ನ ಜೀಯರ್ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ ಎಂದು ಹೇಳಲಾಗಿದೆ.
ಬಳಿಕ ಯಡಿಯೂರಪ್ಪ ಅವರು ಭದ್ರಾಚಲಂ​ನ ಸೀತಾರಾಮ ದೇವಸ್ಥಾನಕ್ಕೂ ಹೋಗಿ ಅಲ್ಲಿಯ ದೇವರ ದರ್ಶನ ಪಡೆದಿದ್ದಾರೆ.
ನಂತರ ಅವರು ನೇರವಾಗಿ ಬೆಂಗಳೂರಿಗೆ ಆಗಮಿಸಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!