ರಾಜಕೀಯ

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಎಐಸಿಸಿ ಅಧ್ಯಕ್ಷ ಪಟ್ಟ?

Shilpa D
ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ  ನೀಡಿರುವ ರಾಜೀನಾಮೆಯನ್ನು ಹಿಂಪಡೆಯಲು ರಾಹುಲ್  ಗಾಂಧಿ  ನಿರಾಕರಿಸಿರುವ  ಹಿನ್ನೆಲೆಯಲ್ಲಿ, ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವುದು ಅನಿವಾರ್ಯವಾಗಿದೆ. 
ಸಂಸತ್ತಿನ ಅಧಿವೇಶನದ ನಂತರ ಆಗಸ್ಟ್ 8 ಅಥವಾ 10ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆ ಸೇರಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಭೆಯಲ್ಲಿ  ರಾಹುಲ್ ಗಾಂಧಿ ಅವರ ರಾಜೀನಾಮೆ ಅನುಮೋದಿಸಿ ಹೊಸ ಅಧ್ಯಕ್ಷರ ಆಯ್ಕೆ  ನಡೆಯುವ ಸಾಧ್ಯತೆ ಇದೆ. ಪಕ್ಷದ ಹೊಸ ಅಧ್ಯಕ್ಷರು ಆಗಸ್ಟ್ 15ರಂದು ಪಕ್ಷದ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ. 
ಸಂಸತ್ತಿನ ಅಧಿವೇಶನಗಳ ನಂತರ ಸಿಡಬ್ಲ್ಯೂಸಿ ಸಭೆ ನಡೆಸಲಿದೆ, ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲ  ಗುರುವಾರ ಘೋಷಿಸಿದ್ದರು.  ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಕೂಡ ಭಾಗವಹಿಸಲಿದ್ದಾರೆ.  ಕೇಂದ್ರ ಸರ್ಕಾರ  ಸಂಸತ್‌ ಅಧಿವೇಶನವನ್ನು  ಆಗಸ್ಟ್ 9 ರವರೆಗೆ ವಿಸ್ತರಿಸಲು ಯೋಜಿಸಿದೆ ಎಂದು ತಿಳಿದು ಬಂದಿದೆ. 
SCROLL FOR NEXT