ರಾಜಕೀಯ

ರಣಭೀಕರ ಪ್ರವಾಹಕ್ಕೆ ಕರ್ನಾಟಕ ತತ್ತರ: ಕಬಡ್ಡಿ ಆಡಿದ ಬಿಜೆಪಿ ಶಾಸಕ ಶ್ರೀರಾಮುಲು, ಆಕ್ರೋಶ!

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರೆ ಅತ್ತ ಬಿಜೆಪಿ ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಳ್ಳಾರಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರೆ ಅತ್ತ ಬಿಜೆಪಿ ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಬಳ್ಳಾರಿಯ ಗಾಂಧಿ ಭವನದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡುವುದರಲ್ಲಿ ನಿರತರಾಗಿದ್ದರು. ಇದು ಜನತೆಯ ಆಕ್ರೋಶಕ್ಕೆ ಕಾರಣವಾಗಿತ್ತು. 

ರಾಜ್ಯ ಸಂಕಷ್ಟದಲ್ಲಿ ಸಿಲುಕಿರುವಾಗ ಶಾಸಕರಿಗೆ ಅದರ ಅರಿವೇ ಇಲ್ಲದಂತಾಗಿದೆ. ರಾಜ್ಯವೇ ಕಂಬನಿ ಮಿಡಿಯುತ್ತಿದ್ದರೂ ಕೆಲ ಶಾಸಕರು ಮಾತ್ರ ಪರಿಹಾರ ಕಾರ್ಯದಲ್ಲಿ ಭಾಗಿಯಾಗುತ್ತಿಲ್ಲ ಎಂಬ ಟೀಕೆ ವ್ಯಕ್ತವಾಗುತ್ತಿದೆ. 

ಈ ಬಗ್ಗೆ ಮಾತನಾಡಿದ ಶ್ರೀರಾಮುಲು ಅವರು ನಾಳೆಯಿಂದ ನೆರೆ ಪ್ರವಾಸಕ್ಕೆ ಹೊರಡುತ್ತೇನೆ. ನಾನು ಕಬಡ್ಡಿ ಆಡಿರುವುದು ಬೇರೆ ಉದ್ದೇಶದಿಂದಲ್ಲ, ಮಕ್ಕಳು ಹಠ ಮಾಡಿದ್ದರಿಂದ ಕಬಡ್ಡಿ ಆಡಿದೆ. ಇದು ಪೂರ್ವನಿಯೋಜಿತ ಕಾರ್ಯಕ್ರಮವಾಗಿತ್ತು. ಹೀಗಾಗಿ ಭಾಗವಹಿಸಿದ್ದೆ ಎಂದು ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT