ರಾಜಕೀಯ

ಸಿಎಂ ಯಡಿಯೂರಪ್ಪ-ಜಿಟಿ ದೇವೇಗೌಡ ಭೇಟಿ: ಜೆಡಿಎಸ್ ಮತ್ತೊಂದು ವಿಕೆಟ್ ಪತನ?

ಇತ್ತೀಚೆಗೆ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದ ಜೆಡಿಎಸ್‌ನ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಹಠಾತ್‌ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು: ಇತ್ತೀಚೆಗೆ ಸ್ವಪಕ್ಷೀಯರ ವಿರುದ್ಧ ಬೇಸರ ವ್ಯಕ್ತಪಡಿಸಿ ರಾಜಕೀಯ ನಿವೃತ್ತಿ ಬಗ್ಗೆ ಮಾತನಾಡಿದ್ದ ಜೆಡಿಎಸ್‌ನ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ.ದೇವೇಗೌಡ ಹಠಾತ್‌ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಸೋಮವಾರ ರಾತ್ರಿ ಭೇಟಿ ನೀಡಿದ ಜಿ.ಟಿ.ದೇವೇಗೌಡ ಕೆಲ ಕಾಲ ಮಾತುಕತೆ ನಡೆಸಿದರು. ಈ ಭೇಟಿ - ಮಾತುಕತೆ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.

ಜೆಡಿಎಸ್ ಪಕ್ಷದಿಂದ ಅನರ್ಹಗೊಂಡಿರುವ ಶಾಸಕ ವಿಶ್ವನಾಥ್,ಎಸ್.ಟಿ.ಸೋಮಶೇಖರ್ ಅವರ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಆಗಮಿಸಿದ ಜಿ.ಟಿ.ದೇವೇಗೌಡ ಅವರು, ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಜಿಟಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಭೇಟಿ ಹಿಂದೆ ಮತ್ತಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಸಂದೇಶ ರವಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ