ಸಿದ್ದರಾಮಯ್ಯ 
ರಾಜಕೀಯ

ದೂರವಾಣಿ ಕದ್ದಾಲಿಕೆ ಪ್ರಕರಣ: ಸಿದ್ದು ಸ್ವಾಗತ, ಕೆಪಿಸಿಸಿ ಟ್ವೀಟ್ ಡಿಲೀಟ್ 

ರಾಜಕಾರಣಿಗಳ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭೂಗತ ಪಾತಕಿಯಂತೆ ವರ್ತಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದ ಕೆಪಿಸಿಸಿ ಕೆಲ ಗಂಟೆಗಳಲ್ಲೇ ತನ್ನ ಟ್ವೀಟ್ ನ್ನು ಡಿಲೀಟ್ ಮಾಡಿದೆ.

ಬೆಂಗಳೂರು: ರಾಜಕಾರಣಿಗಳ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭೂಗತ ಪಾತಕಿಯಂತೆ ವರ್ತಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದ ಕೆಪಿಸಿಸಿ ಕೆಲ ಗಂಟೆಗಳಲ್ಲೇ ತನ್ನ ಟ್ವೀಟ್ ನ್ನು ಡಿಲೀಟ್ ಮಾಡಿದೆ.

ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಿಸಿ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ ಬೆನ್ನಲ್ಲೇ ಕೆಪಿಸಿಸಿ ತನ್ನ ಟ್ವೀಟ್ ಡಿಲೀಟ್ ಮಾಡಿದೆ.

ಪೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿರುವುದರ ಹಿಂದೆ ಸೇಡಿನ ರಾಜಕಾರಣವಿಲ್ಲ ಎಂದು ಆಶಿಸಿರುವ ಸಿದ್ದರಾಮಯ್ಯ, ಪೋನ್ ಕದ್ದಾಲಿಕೆ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ. ಆದರೆ, ಬಿಜೆಪಿ ಸಿಬಿಐಯನ್ನು ಕೈಗೊಂಬೆ ಮಾಡಿಕೊಂಡು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿರುವುದನ್ನು ದೇಶ ಕಂಡಿದೆ. ಇಂತಹ ದುಷ್ಟ ಆಲೋಚನೆ ಬಿಜೆಪಿ ನಾಯಕರಿಗಿಲ್ಲ ಎಂದು ನಂಬಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೂ ಮುನ್ನ ಕೆಪಿಸಿಸಿ, ತಾನು ಕಳ್ಳ, ಪರರನ್ನು ನಂಬಿ ಎಂಬಂತಿದೆ ಮುಖ್ಯಮಂತ್ರಿಗಳ ವರ್ತನೆ, ಆಪರೇಷನ್ ಕಮಲದ ಮೂಲಕ ಸರ್ಕಾರ ಬೀಳಿಸಿ, ಹಿಂಬಾಗಿಲ ಮೂಲಕ ಸರ್ಕಾರ ರಚಿಸಿರುವ ಬಿಜೆಪಿ ಭೂಗತ ಪಾತಕಿಗಳ ರೀತಿ  ವರ್ತಿಸುತ್ತಿದ್ದಾರೆ. ಮೋದಿ ಆಳ್ವಿಕೆಯಲ್ಲಿ ಸಿಬಿಐ ಬಿಜೆಪಿಯ ಮುಂಚೂಣಿ ಘಟಕವಾಗಿ ಕೆಲಸ ಮಾಡುತ್ತಿದೆ. ಪೋನ್ ಕದ್ದಾಲಿಕೆ ಎಂಬುದು ಒಂದು ಸುಳ್ಳು, ದ್ವೇಷ ರಾಜಕಾರಣದ ಸಂಚು ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT