ರಾಜ್ಯ ಬಿಜೆಪಿ ನೂತನ ಸಾರಥಿಯಾಗಿ ನಳಿನ್ ಕುಮಾರ್ ಕಟೀಲ್ ನೇಮಕ
ರಾಜ್ಯ ಬಿಜೆಪಿಗೆ ನೂತನ ಸಾರಥಿಯನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ನಳಿನ್ ಕುಮಾರ್ ಕಟೀಲು ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೈಕಮಾಂಡ್ ಶಾಕ್ ನೀಡಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಇದೀಗ ಈ ಸ್ಥಾನಕ್ಕೆ ಸಂಘ ಪರಿವಾರ ಹಿನ್ನೆಲೆಯ ನಳಿನ್ ಕುಮಾರ್ ಕಟೀಲು ಅವರನ್ನು ನೇಮಕ ಮಾಡುವ ಮೂಲಕ ಒಬ್ಬರಿಗೆ ಒಂದು ಹುದ್ದೆ ಎಂಬ ನೀತಿಯನ್ನು ಪಾಲಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.