ರಾಜಕೀಯ

ಕಾರು, ಮನೆ ಬೇಕಿದ್ದವರು ವಿರೋಧ ಪಕ್ಷ ನಾಯಕನ ಸ್ಥಾನ ಅಲಂಕರಿಸಲಿ- ಡಿಕೆ ಶಿವಕುಮಾರ್ 

Nagaraja AB

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಪ್ರಮುಖ ಹುದ್ದೆಗಳಿಗಾಗಿ ಲಾಬಿ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ನ ಪ್ರತಿಪಕ್ಷದ ನಾಯಕನ ಆಯ್ಕೆ ಹಾಗೂ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಪಕ್ಷದ ಹೈಕಮಾಂಡ್ ಗೆ ತಲೆ ನೋವಾಗಿ ಪರಿಣಮಿಸಿದೆ.  

ವಿಧಾನಸಭೆ ಪ್ರತಿಪಕ್ಷ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ್, ಎಚ್ ಕೆ ಪಾಟೀಲ್ ಮತ್ತಿತರ ನಾಯಕರ ಪೈಪೋಟಿ ನಡೆಸುತ್ತಿದ್ದರೆ ಕೆಪಿಸಿಸಿ ಅಧ್ಯಕ್ಷ ಗಾದಿಯ ಮೇಲೆ ಡಿಕೆ ಶಿವಕುಮಾರ್ ಕಣ್ಣಿಟ್ಟಿದ್ದು, ಲಾಬಿ ನಡೆಸುತ್ತಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತ್ತಿವೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್,  ಪಕ್ಷದ ಪ್ರಮುಖ ಹುದ್ದೆ ವಿಚಾರವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ತಮಗೆ ಯಾವ ವಿರೋಧ ಪಕ್ಷದ ಸ್ಥಾನವೂ ಬೇಡ. ತನ್ನಗೆ ಮನೆ, ಕಾರು ಎಲ್ಲವೂ ಇದೆ. ಯಾರಿಗೆ ಕಾರು, ಮನೆ ಬೇಕೋ ಅಂತಹವರು ವಿರೋಧ ಪಕ್ಷದ ನಾಯಕನ ಸ್ಥಾನ ಅಲಂಕರಿಸಲಿ ತಮಗೆ ಯಾವುದಕ್ಕೂ ಆತುರ ಇಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನಾಳೆ ರಾಜ್ಯಕ್ಕೆ ಪಕ್ಷದ ನಾಯಕರು ಬರುತ್ತಿದ್ದಾರೆ ನೋಡೋಣ ಎಂದು ಅವರು ಹೇಳಿದರು.

SCROLL FOR NEXT