ಸಂಗ್ರಹ ಚಿತ್ರ 
ರಾಜಕೀಯ

ಬಿಎಸ್ ವೈ ಸಂಪುಟ; 3 ಡಿಸಿಎಂಗಳು, ಬೊಮ್ಮಾಯಿಗೆ ಗೃಹ, ಸವದಿಗೆ ಸಾರಿಗೆ.. ಯಾರಿಗೆ ಯಾವ ಖಾತೆ?

ನಿರೀಕ್ಷೆಯಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿನ ಸಚಿವರಿಗೆ ಖಾತೆಗಳ ಹಂಚಿಕೆ ಕಾರ್ಯ ಪೂರ್ಣಗೊಂಡಿದ್ದು, ಮೂವರು ಉಪಮುಖ್ಯಮಂತ್ರಿಗಳನ್ನು ನಿಯೋಜನೆ ಮಾಡಲಾಗಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪ- ಹಣಕಾಸು, ಗುಪ್ತಚರ, ವಾರ್ತಾ ಪ್ರಸಾರ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಶಿಕ್ಷಣ, ಕೃಷಿ,

ಬೆಂಗಳೂರು: ನಿರೀಕ್ಷೆಯಂತೆಯೇ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟದಲ್ಲಿನ ಸಚಿವರಿಗೆ ಖಾತೆಗಳ ಹಂಚಿಕೆ ಕಾರ್ಯ ಪೂರ್ಣಗೊಂಡಿದ್ದು, ಮೂವರು ಉಪಮುಖ್ಯಮಂತ್ರಿಗಳನ್ನು ನಿಯೋಜನೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ಸದಸ್ಯರಿಗೆ ಕೊನೆಗೂ ಖಾತೆಗಳನ್ನು ಹಂಚಿದ್ದು, ಗೋವಿಂದ ಕಾರಜೋಳ, ಡಾ. ಅಶ್ವತ್ ನಾರಾಯಣ ಮತ್ತು ಲಕ್ಷ್ಮಣ ಸವದಿ ಅವರನ್ನು ಡಿಸಿಎಂಗಳಾಗಿ ಬಡ್ತಿ ನೀಡಲಾಗಿದೆ. 

ಪ್ರಮುಖವಾಗಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ ಮತ್ತು ಲಕ್ಷ್ಮಣ ಸವದಿ ಅವರಿಗೆ ಉಪಮುಖ್ಯಮಂತ್ರಿಯಾಗಿ ಬಡ್ತಿ ನೀಡಲಾಗಿದೆ. ಹಾಲಿ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಾಗಿರುವುದು ದಾಖಲೆಯಾಗಿದೆ. ಈ ಹಿಂದೆ ಯಡಿಯೂರಪ್ಪ ಅವರ ಸಂಪುಟದಲ್ಲಿ ಇಬ್ಬರು ಉಪಮುಖ್ಯಮಂತ್ರಿಗಳಿದ್ದರು.

ಉಪಮುಖ್ಯಮಂತ್ರಿಯಾಗಿರುವ ಗೋವಿಂದ ಕಾರಜೋಳ ಅವರಿಗೆ ಲೋಕೋಪಯೋಗಿ, ಜತೆಗೆ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿ ವಹಿಸಲಾಗಿದೆ. ಡಾ. ಅಶ್ವತ್ ನಾರಾಯಣ್ ಅವರಿಗೆ ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಜವಾಬ್ದಾರಿ ವಹಿಸಲಾಗಿದೆ. ಲಕ್ಷ್ಮಣ ಸವದಿ ಅವರಿಗೆ ಸಾರಿಗೆ ಇಲಾಖೆ ನೀಡಲಾಗಿದೆ.  ಇನ್ನು ಹಂಚಿಕೆಯಾಗದೇ ಉಳಿದಿರುವ ಎಲ್ಲಾ ಪ್ರಮುಖ ಖಾತೆಗಳನ್ನು ಯಡಿಯೂರಪ್ಪ ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.

ಉಳಿದಂತೆ ಯಾವ ಸಚಿವರಿಗೆ ಯಾವ ಖಾತೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸಿಎಂ ಬಿ.ಎಸ್.ಯಡಿಯೂರಪ್ಪ- ಹಣಕಾಸು, ಗುಪ್ತಚರ, ವಾರ್ತಾ ಪ್ರಸಾರ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಇಂಧನ, ಶಿಕ್ಷಣ, ಕೃಷಿ,

1) ಗೋವಿಂದ ಕಾರಜೋಳ – ಲೋಕೋಪಯೋಗಿ, ಸಮಾಜ ಕಲ್ಯಾಣ
2) ಡಾ. ಅಶ್ವತ್ಥ ನಾರಾಯಣ – ಉನ್ನತ ಶಿಕ್ಷಣ, ಐಟಿ ಮತ್ತು  ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ,
3) ಲಕ್ಷ್ಮಣ ಸವದಿ – ಸಾರಿಗೆ
4) ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್
5) ಜಗದೀಶ್ ಶೆಟ್ಟರ್ – ಬೃಹತ್, ಮಧ್ಯಮ ಕೈಗಾರಿಕೆ
6) ಆರ್. ಅಶೋಕ್ – ಕಂದಾಯ
7) ಬಿ. ಶ್ರೀರಾಮುಲು – ಆರೋಗ್ಯ
8) ಸುರೇಶ್ ಕುಮಾರ್ – ಪ್ರಾಥಮಿಕ ಶಿಕ್ಷಣ
9) ವಿ ಸೋಮಣ್ಣ – ವಸತಿ, ಕನ್ನಡ ಮತ್ತು ಸಂಸ್ಕೃತಿ
10) ಸಿ ಟಿ ರವಿ – ಪ್ರವಾಸೋದ್ಯಮ
11) ಬಸವರಾಜ್ ಬೊಮ್ಮಾಯಿ – ಗೃಹ
12) ಕೋಟ ಶ್ರೀನಿವಾಸ್ ಪೂಜಾರಿ – ಮೀನುಗಾರಿಕೆ, ಬಂದರು
13) ಜೆ ಸಿ ಮಾಧುಸ್ವಾಮಿ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
14) ಸಿ.ಸಿ ಪಾಟೀಲ್ – ಗಣಿ ಮತ್ತು ಭೂ ವಿಜ್ಞಾನ, ವಾಣಿಜ್ಯ ಮತ್ತು ಕೈಗಾರಿಕೆ
15) ಪ್ರಭು ಚೌವ್ಹಾಣ್ – ಪಶು ಸಂಗೋಪನೆ
16) ಶಶಿಕಲಾ ಜೊಲ್ಲೆ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
17) ನಾಗೇಶ್ – ಅಬಕಾರಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!