ಸಿ.ಟಿ ರವಿ 
ರಾಜಕೀಯ

ನಾನು ಇದ್ದರೂ ಬಿಜೆಪಿಯಲ್ಲಿ, ಸತ್ತರೂ ಬಿಜೆಪಿಯಲ್ಲಿ: ಸಿ.ಟಿ.ರವಿ

ನಾನು ಅಸಮಾಧಾನಿತನೂ ಅಲ್ಲ, ಬಂಡಾಯಗಾರನೂ ಅಲ್ಲ. ಸಚಿವ ಸ್ಥಾನಕ್ಕಾಗಿ ನಾನು ಲಾಬಿ ಮಾಡಿರಲಿಲ್ಲ. ‌ಇದೇ ಖಾತೆ ಬೇಕು ಎಂದು ಯಾರನ್ನೂ ಕೇಳಿಲ್ಲ ಎಂದು ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ನಾನು ಅಸಮಾಧಾನಿತನೂ ಅಲ್ಲ, ಬಂಡಾಯಗಾರನೂ ಅಲ್ಲ. ಸಚಿವ ಸ್ಥಾನಕ್ಕಾಗಿ ನಾನು ಲಾಬಿ ಮಾಡಿರಲಿಲ್ಲ. ‌ಇದೇ ಖಾತೆ ಬೇಕು ಎಂದು ಯಾರನ್ನೂ ಕೇಳಿಲ್ಲ ಎಂದು ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಪಕ್ಷ ನನಗೆ ಹಲವಾರು ಜವಾಬ್ದಾರಿಗಳನ್ನು ನೀಡಿದೆ. ಹಲವು ಹಂತಗಳಲ್ಲಿ ಹತ್ತಾರು ಹುದ್ದೆಗಳನ್ನು ನೀಡಿದೆ, ಪಕ್ಷ ನನಗೆ ತಾಯಿ ಸಮಾನ. ನಾನು ಸ್ವಾಭಿಮಾನಿ. ನಾನು ಇರುವುದು ಬಿಜೆಪಿಯಲ್ಲಿ ಸಾಯುವುದು ಕೂಡ ಬಿಜೆಪಿಯಲ್ಲೇ. ಈ ಬಗ್ಗೆ ಅನಗತ್ಯ ಗೊಂದಲ ಬೇಡ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್​ನಲ್ಲಿ ಸ್ಪಷ್ಟಪಡಿಸಿರುವ ಸಿ.ಟಿ. ರವಿ, ಇಂದು ನಡೆಯುವ ನಳೀನ್ ಕುಮಾರ್ ಕಟೀಲು ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮದಲ್ಲಿ ಎಲ್ಲ ಗೊಂದಲಗಳಿಗೂ ತೆರೆ ಎಳೆಯುತ್ತೇನೆ. ಪಕ್ಷ ನನಗೆ ಹತ್ತಾರು ಜವಾಬ್ದಾರಿ ಕೊಟ್ಟಿದೆ. ನಾನು ಬಂಡಾಯಗಾರನಲ್ಲ, ಸ್ವಾಭಿಮಾನಿ. ನಾನು ಯಾವತ್ತೂ ಪಕ್ಷ ನಿಷ್ಠೆ ಬಿಟ್ಟು ನಡೆದುಕೊಂಡಿಲ್ಲ. ಮಂತ್ರಿಯಾಗಬೇಕೆಂದು ಯಾರಲ್ಲೂ ಕೇಳಿಲ್ಲ. ಕೆಲವು ಸಂಗತಿಯನ್ನು ಕಾಲವೇ ನಿರ್ಣಯಿಸುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!