ರಾಜಕೀಯ

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್!

Srinivas Rao BV

ಬೆಂಗಳೂರು: ಜಂತಕಲ್ ಗಣಿ ಪರವಾನಿಗೆ ನವೀಕರಣ ಪ್ರಕರಣದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಿಲೀಫ್ ದೊರೆತಿದೆ. 

ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್ ಐಟಿ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಟ್ಟಿದೆ. 

ಎಸ್ ಐಟಿ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಗಗನ್ ಬಡೇರಿಯಾ ಹಾಗೂ ವಿನೋದ್ ಗೋಯಲ್ ಹೆಸರು ಉಲ್ಲೇಖಿಸಲಾಗಿದೆ. ಜಂತಕಲ್ ಗಣಿ ಹಗರಣಕ್ಕೆ ಸಂಬಂಧಿಸಿದಂತೆ ನಡೆದ ವಿಚಾರಣೆ ವೇಳೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಕುಮಾರಸ್ವಾಮಿ ಅವರ ಹೆಸರನ್ನು ಉಲ್ಲೇಖಿಸಿದ್ದರು. 

ವಿನೋದ್ ಗೋಯಲ್ ಗೆ ಭೂಮಿ ಮಂಜೂರು ಮಾಡುವಂತೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಮಗೆ ಮೌಖಿಕ ಆದೇಶ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಹೇಳಿದ್ದಾರೆ. ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿತ್ತು. ಇನ್ನು ವಿನೋದ್ ಗೋಯಲ್ ಮೂಲಕ ತನ್ನ ಮಗ ಗಗನ್ ಬಡೇರಿಯಾ ಅಕೌಂಟ್‍ಗೆ ಗಂಗಾರಾಮ್ ಹಣ ಹಾಕಿಸಿಕೊಂಡಿದ್ದರು ಎಂಬ ಆರೋಪವೂ ಇದೆ. ಗಂಗಾರಾಮ್ ಐಎಎಸ್ ಅಧಿಕಾರಿ ಆದ್ದರಿಂದ ಸರ್ಕಾರದ ಅನುಮತಿ ಕೇಳಬೇಕು. ಹೀಗಾಗಿ ಗಂಗಾರಾಮ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಹಾಕಲು ಸರ್ಕಾರದ ಅನುಮತಿ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 

SCROLL FOR NEXT