ಸಂಗ್ರಹ ಚಿತ್ರ 
ರಾಜಕೀಯ

ಬಿಜೆಪಿ ಸದಸ್ಯತ್ವ ಅಭಿಯಾನ: 5ನೇ ಸ್ಥಾನದಲ್ಲಿ ಕರ್ನಾಟಕ

ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಐದನೇ ಸ್ಥಾನ ಪಡೆದಿದೆ.  

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಕರ್ನಾಟಕ ಐದನೇ ಸ್ಥಾನ ಪಡೆದಿದೆ. 

ರಾಜ್ಯದಲ್ಲಿ ಈವರೆಗೆ 27,77,823 ಸದಸ್ಯತ್ವ ನೋಂದಣಿಯಾಗಿದ್ದು, ದೇಶದಲ್ಲಿ ಕರ್ನಾಟಕ ಉತ್ತಮ ಪ್ರಗತಿ ಸಾಧಿಸಿದೆ. 

ಸದಸ್ಯತ್ವ ಕುರಿತ ಪ್ರಗತಿ ಪರಿಶೀಲನಾ ಸಭೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆಯಿತು. ರಾಜ್ಯದ ಪ್ರಗತಿ ಬಗ್ಗೆ ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
 
ಕರ್ನಾಟಕ ಬಿಜೆಪಿ ಸದಸ್ಯತಾ ಅಭಿಯಾನದ ಸಂಚಾಲಕ, ವಿಧಾನ ಪರಿಷತ್  ಸದಸ್ಯರೂ ಆದ ಎನ್.ರವಿಕುಮಾರ್ ರಾಜ್ಯದ ಸದಸ್ಯತ್ವ ಅಭಿಯಾನದ ವರದಿ ನೀಡಿದರು. ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ  ಬಿಜೆಪಿ ಸದಸ್ಯತಾ ಅಭಿಯಾನದ ಸಹಸಂಚಾಲಕ ಜಗದೀಶ ಹಿರೇಮನಿ ಸಭೆಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸದಸ್ಯತಾ ಅಭಿಯಾನದ ರಾಷ್ಟ್ರೀಯ ಸಂಚಾಲಕರಾದ ಶಿವರಾಜ್ ಸಿಂಗ್ ಚವ್ಹಾಣ್, ರಾಷ್ಟ್ರೀಯ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾಮೋಹನ ಸಿಂಗ್ ಹಾಗೂ ರಾಷ್ಟ್ರೀಯ ಸಂಘಟನಾ ಚುನಾವಣಾ ಸಹಉಸ್ತುವಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!