ದಿನೇಶ್ ಗುಂಡೂರಾವ್ 
ರಾಜಕೀಯ

ಆಪರೇಷನ್ ಕಮಲ-2 ಆದರೆ ಜನರು ಸುಮ್ಮನಿರುವುದಿಲ್ಲ: ದಿನೇಶ್ ಗುಂಡೂರಾವ್

ಬಿಜೆಪಿಯವರು ಉಪ ಚುನಾವಣೆಯ ಸೋಲಿನ ಭೀತಿಯಿಂದ ಆಪರೇಷನ್ ಕಮಲ-2 ನಡೆಸಲು ಕೈ ಹಾಕಿದ್ದಾರೆ. ಅಂತಹ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದರೆ ರಾಜ್ಯದ ಜನತೆ ಸುಮ್ಮನೆ ಕೂರುವುದಿಲ್ಲ. ಈಗಾಗಲೇ ಜನ ಬೇಸತ್ತು ಹೋಗಿದ್ದಾರೆ. ಮತ್ತೊಮ್ಮೆ ನಡೆದರೆ ರೊಚ್ಚಿಗೆದ್ದು ಅವರನ್ನು ಹರಾಜು ಹಾಕುತ್ತಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. 

ಹರಪನಹಳ್ಳಿ: ಬಿಜೆಪಿಯವರು ಉಪ ಚುನಾವಣೆಯ ಸೋಲಿನ ಭೀತಿಯಿಂದ ಆಪರೇಷನ್ ಕಮಲ-2 ನಡೆಸಲು ಕೈ ಹಾಕಿದ್ದಾರೆ. ಅಂತಹ ಕೆಲಸಕ್ಕೆ ಮತ್ತೊಮ್ಮೆ ಕೈ ಹಾಕಿದರೆ ರಾಜ್ಯದ ಜನತೆ ಸುಮ್ಮನೆ ಕೂರುವುದಿಲ್ಲ. ಈಗಾಗಲೇ ಜನ ಬೇಸತ್ತು ಹೋಗಿದ್ದಾರೆ. ಮತ್ತೊಮ್ಮೆ ನಡೆದರೆ ರೊಚ್ಚಿಗೆದ್ದು ಅವರನ್ನು ಹರಾಜು ಹಾಕುತ್ತಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. 

ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ ನಾಯ್ಡು ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 11-12ರಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. 

ಮತ ಯಂತ್ರದ ಬಗ್ಗೆ ಈಗಲೇ ಅನುಮಾನವಿದೆ. ಬೇರೆ ಬೇರೆ ದೇಶದಲ್ಲಿ ಇವಿಎಂ ಬಳಕೆ ಕೈ ಬಿಡಲು ಚುನಾವಣೆ ಆಯೋಗ ಗಂಭೀರವಾಗಿ ಚಿಂತಿಸಬೇಕು ಎಂದು ತಿಳಿಸಿದರು. 

ರಾಜ್ಯ ಕಾಂಗ್ರೆಸ್ ನಲ್ಲಿ ಒಡಕಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಸರ್ಕಾರ ಅನೈತಿಕವಾಗಿ, ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದೆ. ಇಂದೂ ಯಡಿಯೂರಪ್ಪನವರ ಸರ್ಕಾರಕ್ಕೆ ಬಹುಮತವಿಲ್ಲ. ಕೃತಕ ಬಹುಮತ ಸೃಷ್ಟಿಸಲಾಗಿದೆ. ಈ ಉಪ ಚುನಾವಣೆ ನಂತರ ಬಹುಮತ ಕಳೆದುಕೊಳ್ಳಲಿದೆ. ಮೈನಾರಿಟಿ ಸರ್ಕಾರದ ಪತನ ಗ್ಯಾರಂಟಿ. ಈ ಸರ್ಕಾರ ಬಿದ್ದ ನಂತರ ಮುಂದೇನಾಗುತ್ತದೆ ಎಂಬುದನ್ನು ನೋಡೋಣ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ