ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಿಬಿಎಂಪಿ ಸದಸ್ಯ ಆರ್ ವಸಂತಕುಮಾರ್ 
ರಾಜಕೀಯ

ಬೈಎಲೆಕ್ಷನ್ ಗೆ ಮುನ್ನ ಆಪರೇಷನ್:ಕೈ ಬಿಟ್ಟು ಕಮಲ ಹಿಡಿದ  ಬಿಬಿಎಂಪಿ ಸದಸ್ಯ ಆರ್ ವಸಂತಕುಮಾರ್ 

ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಸಂಪಂಗಿರಾಮನಗರ ವಾರ್ಡ್‍ನ ಕಾಂಗ್ರೆಸ್ ಸದಸ್ಯ ಆರ್ ವಸಂತಕುಮಾರ್ ಮಂಗಳವಾರ ಕಾಂಗ್ರೆಸ್ ತೊರೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರಪಾಲಿಕೆಯ ಸಂಪಂಗಿರಾಮನಗರ ವಾರ್ಡ್‍ನ ಕಾಂಗ್ರೆಸ್ ಸದಸ್ಯ ಆರ್ ವಸಂತಕುಮಾರ್ ಮಂಗಳವಾರ ಕಾಂಗ್ರೆಸ್ ತೊರೆದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ನಗರದ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿಯವರು ವಸಂತ್ ಕುಮಾರ್ ಅವರನ್ನು ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಸಂತಕುಮಾರ್ , ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಯಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಬಿಬಿಎಂಪಿಯಲ್ಲಿ ಬಿಜೆಪಿ ಆಡಳಿತವಿದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದೆ. ಇದರಿಂದ ತಮ್ಮ ವಾರ್ಡ್ ಸೇರಿದಂತೆ ಇಡೀ ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಈ ಹಿನ್ನೆಲೆಯಲ್ಲಿ ತಾವು ಪಕ್ಷ ಸೇರುತ್ತಿರುವುದಾಗಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT