ರಾಜಕೀಯ

ಇನ್ನು ಮುಂದೆ ಹೆಚ್ಚು ಈರುಳ್ಳಿ ಖರೀದಿಸಿದರೂ ತೆರಿಗೆ ಇಲಾಖೆಯಿಂದ ನೋಟಿಸ್ ಬರಬಹುದು: ಗುಂಡೂರಾವ್ ವ್ಯಂಗ್ಯ

Manjula VN

ಬೆಂಗಳೂರು: ಇನ್ನು ಮುಂದೆ ಹೆಚ್ಚು ಈರುಳ್ಳಿ ಖರೀದಿಸುವವರಿಗೂ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಅವರು ಕೇಂದ್ರ ಸರ್ಕಾರದ ಕುರಿತು ವ್ಯಂಗ್ಯವಾಡಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಇನ್ನು ಮುಂದೆ ಹೆಚ್ಚು ಈರುಳ್ಳಿ ಖರೀದಿಸುವವರಿಗೂ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದರೂ ನೀಡಬಹುದು. ಪೆಟ್ರೋಲ್, ಡೀಸೆಲ್ ಬಳಿಕ ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದ ಎಂದು ಹೇಳಿದ್ದಾರೆ. 

ಈ ಹಿಂದೆ ಸಂಪಂಗಿರಾಮನಗರ ಕಾಂಗ್ರೆಸ್ ಕಾರ್ಪೋರೇಟರ್ ಆರ್.ವಸಂತ್ ಕುಮಾರ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 

ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಗುಂಡೂರಾವ್ ಅವರು, ಶಿವಾಜಿನಗರ ಕ್ಷೇತ್ರದಲ್ಲಿ ಸೋಲುವ ಭಯದಿಂದ ಹೀಗೆ ಬಿಜೆಪಿ ನಾಯಕರು ಹೀಗೆ ಮಾಡಿದ್ದಾರೆ. ಬಿಜೆಪಿಯ ಈ ರೀತಿಯ ಕೀಳು ಮಟ್ಟದ ರಾಜಕಾರಣವನ್ನು ನಾನು ಖಂಡಿಸುತ್ತೇನೆ. ಗೆಲ್ಲಲು ವಾಮ ಮಾರ್ಗ ಅನುಸರಿಸುತ್ತಿದ್ದಾರೆ.  ಒತ್ತಡ ಹೇರಿ ಕರೆದುಕೊಂಡು ಹೋಗಿದ್ದರು, ಆದರೆ ಈಗ ವಸಂತ್ ಮತ್ತೆ ವಾಪಸ್ಸಾಗಿದ್ದಾರೆ. ಬಿಜೆಪಿಯದ್ದು ಇದು ಹಳೇ ಚಾಳಿ, ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. 

SCROLL FOR NEXT