ಗೋವಿಂದ್ ಕಾರಜೋಳ 
ರಾಜಕೀಯ

ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಬಂದವರು ಗೋಲಿ ಆಡುವ ಹುಡುಗರಲ್ಲ: ಡಿಸಿಎಂ ಕಾರಜೋಳ

ಕಾಂಗ್ರೆಸ್ಸಿಗರು ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಅವರೇಕೆ ಪಕ್ಷ ಬಿಟ್ಟು ಬಿಜೆಪಿಗೆ ಬರುತ್ತಿದ್ದರು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಪರೇಷನ್ ಕಮಲ ಮುಂದುವರಿಸಿದಲ್ಲಿ...

ಬಾಗಲಕೋಟೆ: ಕಾಂಗ್ರೆಸ್ಸಿಗರು ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಂಡಿದ್ದರೆ ಅವರೇಕೆ ಪಕ್ಷ ಬಿಟ್ಟು ಬಿಜೆಪಿಗೆ ಬರುತ್ತಿದ್ದರು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆಪರೇಷನ್ ಕಮಲ ಮುಂದುವರಿಸಿದಲ್ಲಿ ಜನ ಅಟ್ಟಾಡಿಸಿಕೊಂಡು ಹೋಡೆಯುತ್ತಾರೆ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಜಿಲ್ಲೆಯ ಮುಧೋಳ ತಾಲೂಕು ಯಡಹಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಕಾಂಗ್ರೆಸ್ಸಿಗರು ತಮ್ಮ ಪಕ್ಷದ ಶಾಸಕರನ್ನು  ಸರಿಯಾಗಿ ಇಟ್ಟುಕೊಳ್ಳದ ಹಿನ್ನೆಲೆಯಲ್ಲಿ ೧೭ ಜನ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬಂದಿದ್ದಾರೆ. ಅವರೆಲ್ಲ ಗೋಲಿ ಆಡುವವರಲ್ಲ. ಜವಾಬ್ದಾರಿ ಇದ್ದವರು. ನಾಲ್ಕಾರು ಬಾರಿ ಶಾಸಕರಾಗಿ ಆಯ್ಕೆಯಾದವರು. ಅವರೆಲ್ಲ ಮನನೊಂದು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ಯಾರೂ ಹುಡುಗಾಟಿಕೆಗೆ ರಾಜೀನಾಮೆ ಕೊಡುವುದಿಲ್ಲ. ರಾಜೀನಾಮೆ ಕೊಟ್ಟು ಜನರ ಮಧ್ಯೆ ಆಯ್ಕೆಗೊಳ್ಳುವುದು ಅಂದುಕೊಂಡಷ್ಟು ಸುಲಭವಲ್ಲ. ಇದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಮುಂದಿನ ಮೂರುವರೆ ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಭದ್ರವಾಗಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಉಪ ಚುನಾವಣೆಯಲ್ಲಿ ೧೫ ಕ್ಕೆ ೧೫ ಸ್ಥಾನ ಗೆಲ್ಲುತ್ತೇವೆ. ಈ ಹಿಂದೆಯೂ ಈ ಮಾತು ಹೇಳಿದ್ದೆ, ಈಗಲೂ ಹೇಳುವೆ. ಅದರಲ್ಲಿ ಬದಲಾವಣೆ ಇಲ್ಲ ಎಂದರು.

ಸಚಿವ ಸ್ಥಾನಕ್ಕಾಗಿ ನಡೆದಿರುವ ಪೈಪೋಟಿ ಕುರಿತು ಮಾತನಾಡಿದ ಅವರು, ಸಚಿವ ಸ್ಥಾನ ಕೊಡುವುದು ಬಿಡುವುದು ನಮ್ಮ ಕೈಯಲ್ಲಿ ಇಲ್ಲ. ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಈ ಕುರಿತಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಪಕ್ಷದ ಮುಖಂಡರೊಮದಿಗೆ ಸಮಾಲೋಚನೆ ಮಾಡಿ ಯಾರನ್ನು ಮಂತ್ರಿ ಮಾಡಬೇಕು ಎನ್ನುವುದನ್ನು ತೀರ್ಮಾನಿಸುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT