ಎಂ ಟಿ ಬಿ ನಾಗರಾಜ್ 
ರಾಜಕೀಯ

ನಾನು ಚುನಾವಣೆಯಲ್ಲಿ ಸೋತರೆ ಅದಕ್ಕೆ ಬಿಜೆಪಿ ಸಂಸದ ಬಚ್ಚೇಗೌಡ ಅವರೇ ಕಾರಣ: ಸಿಎಂಗೆ ಎಂ.ಟಿ.ಬಿ.ನಾಗರಾಜ್ ದೂರು 

ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಎರಡು ದಿನ ಬಾಕಿ ಇರುವ ಬೆನ್ನಲ್ಲೇ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಶನಿವಾರ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳಲು ಎರಡು ದಿನ ಬಾಕಿ ಇರುವ ಬೆನ್ನಲ್ಲೇ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಶನಿವಾರ ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.


ನಾನು ಚುನಾವಣೆಯಲ್ಲಿ ಸೋತರೆ ಅದಕ್ಕೆ ಬಿಜೆಪಿ ಸಂಸದ ಬಚ್ಚೇಗೌಡ ಅವರೇ ಕಾರಣ. ಅವರು ಚುನಾವಣೆಯಲ್ಲಿ ತಮ್ಮ ಪರ ಪ್ರಚಾರ ಮಾಡಿಲ್ಲ. ಸಹಕಾರ ನೀಡಿಲ್ಲ ಎಂದು ಎಂಟಿಬಿ ನಾಗರಾಜ್ ಮುಖ್ಯಮಂತ್ರಿಗೆ ದೂರು ನೀಡಿದರು ಎಂದು ತಿಳಿದುಬಂದಿದೆ.


ಬಚ್ಚೇಗೌಡರು ಮಗ ಶರತ್ ಪರ ರಹಸ್ಯವಾಗಿ ಸಭೆ ನಡೆಸಿ ಬೆಂಬಲ ನೀಡಿದ್ದಾರೆ. ಅವರು ರಹಸ್ಯವಾಗಿಯೇ ತಮ್ಮ ಬೆಂಬಲಿಗರ ಮೂಲಕ ಮಗನ ಪರ ಸಂದೇಶ ರವಾನಿಸಿದ್ದಾರೆ ಎಂದು ಎಂಟಿಬಿ ದೂರು ನೀಡಿದರು. ಈ ಕುರಿತು ಒಂದಷ್ಟು ಸಾಕ್ಷಿಗಳೂ ತಮ್ಮ ಬಳಿ ಇವೆ ನಾಗರಾಜ್ ತಿಳಿಸಿದರು. ಒಂದೊಮ್ಮೆ ವ್ಯತಿರಿಕ್ತ ಫಲಿತಾಂಶ ಬಂದರೆ ತಮ್ಮನ್ನು ಕೈಬಿಡದಂತೆ ಮನವಿ ಮಾಡಿದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್