ಮುಖ್ಯಮಂತ್ರಿ ಯಡಿಯೂರಪ್ಪ 
ರಾಜಕೀಯ

ಉಪಚುನಾವಣೇಲಿ 13, 2023ಕ್ಕೆ 150 ಸ್ಥಾನ ಗೆದ್ದು ಬರ್ತೀವಿ: ಸಿಎಂ ಯಡಿಯೂರಪ್ಪ

ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ಇನ್ನು ಮೂರುವರೆ ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಉಪ ಚುನಾವಣೆಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು ಇನ್ನು ಮೂರುವರೆ ವರ್ಷಗಳ ಕಾಲ ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಯಲಹಂಕ ಉಪನಗರದಲ್ಲಿ ನೂತನವಾಗಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಮತ್ತು 400ಕೋಟಿ.ರೂ. ಅಂದಾಜು ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾನು ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳು ಎಲ್ಲಾ ಕ್ಷೇತ್ರಗಳಲ್ಲೂ ಎರಡೆರಡು ಸಲ ಪ್ರಚಾರ ಮಾಡಿದ್ದೇವೆ. ಆದ್ದರಿಂದ 13 ಕ್ಷೇತ್ರಗಳಲ್ಲಿ ನೂರಕ್ಕೆ ನೂರು‌ ಗೆಲ್ಲುತ್ತೇವೆ. ಮೂರೂವರೆ ವರ್ಷ ಸ್ಥಿರ ಸರ್ಕಾರ ಕೊಡುತ್ತೇವೆ. ಪ್ರತಿಪಕ್ಷಗಳೂ ಸಹಕಾರ ಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು. ಅಲ್ಲದೆ ಮೂರೂವರೆ ವರ್ಷದ ಬಳಿಕ ಮತ್ತೆ ಚುನಾವಣೆಯಲ್ಲಿ 150 ಸ್ಥಾನ ಗೆದ್ದು ಅಧಿಕಾರಕ್ಕೆ ಏರುವುದಾಗಿಯೂ ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಮುನ್ನ ಉಪಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಗಳು ಕಂಡುಬರಲಿದೆ ಎಂದಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಉಲ್ಲೇಖಿಸಿದ ಯಡಿಯೂರಪ್ಪ ಅಂತಹಾ ಬದಲಾವಣೆಗಳು ಆಗುವುದಿಲ್ಲ. ನಾವು ಅಧಿಕಾರದಲ್ಲಿ ಮುಂದುವರಿದರೆ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲಿರಲಿದೆ ಅಷ್ಟೇ ಬದಲಾವಣೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ