ಸಂಗ್ರಹ ಚಿತ್ರ 
ರಾಜಕೀಯ

ಉಪಚುನಾವಣೆ: ಬಿಜೆಪಿ ಗೆದ್ದರೂ ಯಡಿಯೂರಪ್ಪಗೆ ಕಠಿಣವಾಗಿ ಪರಿಣಮಿಸಲಿದೆ ಮುಂದಿನ ಹಾದಿ?

ಉಪಚುನಾವಣೆ ಅಂತ್ಯಗೊಂಡಿದ್ದು, ಇದೀಗ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಫಲಿತಾಂಶಗಳನ್ನು ಪ್ರಕಟಿಸಿದ್ದು, ಸಮೀಕ್ಷಾ ವರದಿ ಬಿಜೆಪಿ ಪರವಾಗಿ ಬಂದಿವೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರು, ಮುಂದಿನ ಹಾದಿ ಅಷ್ಟು ಸುಲಭವಾಗಿಲ್ಲ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ಉಪಚುನಾವಣೆ ಅಂತ್ಯಗೊಂಡಿದ್ದು, ಇದೀಗ ಚುನಾವಣಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಫಲಿತಾಂಶಗಳನ್ನು ಪ್ರಕಟಿಸಿದ್ದು, ಸಮೀಕ್ಷಾ ವರದಿ ಬಿಜೆಪಿ ಪರವಾಗಿ ಬಂದಿವೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದರು, ಮುಂದಿನ ಹಾದಿ ಅಷ್ಟು ಸುಲಭವಾಗಿಲ್ಲ ಎಂದು ಹೇಳಲಾಗುತ್ತಿದೆ. 

ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಅನರ್ಹ ಶಾಸಕರನ್ನು ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳಾಗಿ ನಿಲ್ಲಿಸುವ ಮೂಲಕ ಯಡಿಯೂರಪ್ಪ ಅವರು ಈಗಾಗಲೇ ಪಕ್ಷದ ವಿರೋಧವನ್ನು ಎದುರಿಸುತ್ತಿದ್ದಾರೆ. ಅನರ್ಹ ಶಾಸಕರು ಚುನಾವಣೆಯಲ್ಲಿ ಗೆದ್ದರೆ, ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಅವರು ಈ ಹಿಂದೆಯೇ ಹೇಳಿದ್ದರು. ಪ್ರಸ್ತುತ ಬಿಜೆಪಿ ಪಕ್ಷದಲ್ಲಿಯೇ ಹಿರಿಯ ನಾಯಕರಿದ್ದು, ಪಕ್ಷದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ನಡುವಲ್ಲೇ ಒಂದು ವೇಳೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದೇ ಆದರೆ, ಯಡಿಯೂರಪ್ಪ ಅವರಿಗೆ ಮುಂದಿನ ಹಾದಿ ಮತ್ತಷ್ಟು ಕಠಿಣವಾಗಿ ಪರಿಣಮಿಸಲಿದೆ. ಪಕ್ಷದಿಂದಲೇ ಸಾಕಷ್ಟು ವಿರೋಧ ಹಾಗೂ ಬಂಡಾಯವನ್ನು ಎದುರಿಸಬೇಕಾದ ಪರಿಸ್ಥಿತಿ ಎದುರಾಗಲಿದೆ. ಈ ನಡುವೆ ಯಡಿಯೂರಪ್ಪ ಅವರು 1-2 ಉಪ ಮುಖ್ಯಮಂತ್ರಿಗಳ ಕೈಬಿಟ್ಟು ಅನರ್ಹ ಶಾಸಕರಿಗೆ ಸ್ಥಾನ ನೀಡಲು ಚಿಂತನೆ ನಡೆಸುತ್ತಿದ್ದು, ಲಕ್ಷ್ಮಣ್ ಸವದಿಯವರನ್ನೇ ಕೈಬಿಡಲಿದ್ದಾರೆಂದು ಹೇಳಲಾಗುತ್ತಿದೆ. 

ಎಂಟಿಬಿ ನಾಗರಾಜ್, ಎಹೆಚ್ ವಿಶ್ವನಾಥ್, ರಮೇಶ್ ಜಾರಿಕಿಹೊಳಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇ ಆದರೆ, ಮೂವರಿಗೂ ಯಡಿಯೂರಪ್ಪ ಅವರು ತಮ್ಮ ಸಂಪುಟದಲ್ಲಿ ಸ್ಥಾನ ನೀಡಲಿದ್ದಾರೆ. ಒಂದು ವೇಳೆ ಸೋತರೂ ಕೂಡ ಎಂಎಲ್'ಸಿಗಳಾಗಿ ಮೂವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ರಾಣೆಬೆನ್ನೂರಿನಲ್ಲಿ ಆರ್.ಶಂಕರ್ ಅವರಿಗೆ ಟಿಕೆಟ್ ನೀಡದ ಕಾರಣ ಅವರಿಗೆ ಎಂಎಲ್'ಸಿ ಸೀಟು ನೀಡಿ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 

ಪ್ರಸ್ತುತ ಯಡಿಯೂರಪ್ಪ ಸರ್ಕಾರದಲ್ಲಿ ಒಟ್ಟು 17 ಮಂದಿ ಸಚಿವರಿದ್ದು, ಇದರದಲ್ಲಿ ಮುಖ್ಯಮಂತ್ರಿಗಳು ಹಾಗೂ ಎರೆಡೆರಡೂ ಸಚಿವ ಸ್ಥಾನಗಳನ್ನು ಹೊಂದಿರುವ ನಾಯಕರೂ ಸೇರ್ಪೆಡೆಗೊಂಡಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವ ಎಲ್ಲರಿಗೂ ಸಂಪುಟದಲ್ಲಿ ಸ್ಥಾನ ನೀಡಲಾಗುವುದಿಲ್ಲ. ಕೆಲವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಉಮೇಶ್ ಕತ್ತಿ ಮತ್ತು ಅರವಿಂದ ಲಿಂಬಾವಳಿ ಕೂಡ ಈ ಬಾರಿ ಸಚಿವರಾಗಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಂದರ್ಭದಲ್ಲಿ ಇಬ್ಬರ ಹೆಸರು ಮೊದಲ ಪಟ್ಟಿಯಲ್ಲಿ ಇರಲಿದೆ. ಪಕ್ಷ ಈ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಂಡಿದೆ. ಮತ್ತಿತರೆ ಹಿರಿಯ ನಾಯಕರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳುವುದರಲ್ಲಿ ಯಡಿಯೂರಪ್ಪ ಒತ್ತಡದಲ್ಲಿರುವುದು ನಿಜ. ಇವರಿಗೆ ಸ್ಥಾನ ಕಲ್ಪಿಸಲು ಯಡಿಯೂರಪ್ಪ ಅವರು ಕೆಲ ಸಚಿವರನ್ನು ಸಂಪುಟದಿಂದ ಕೈಬಿಡಲಿದ್ದಾರೆಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. 

ಹಿರಿಯ ಶಾಸಕನಾಗಿ ಸಂಪುಟದಲ್ಲಿ ಸ್ಥಾನ ಪಡೆಯುವ ಹಕ್ಕು ನನಗಿದೆ. ಶೇ.100ಕ್ಕೆ 100ರಷ್ಟು ಸಚಿವನಾಗಲೂ ನಾನು ಇಚ್ಛಿಸುತ್ತೇನೆ ಎಂದು ಶಾಸಕ ಉಮೇಶ್ ಕತ್ತಿಯವರು ಹೇಳಿದ್ದಾರೆ. 

ಈ ಬಾರಿ ರಮೇಶ್ ಜಾರಕಿಹೊಳಿ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಒಲಿದು ಬರಲಿದೆ. ಈಗಾಗಲೇ ಪಕ್ಷ ಮೂರು ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಸ್ಥಾಪಿಸಿದ್ದು, ಸವದಿ ಸ್ಥಾನಕ್ಕೆ ರಮೇಶ್ ಅಥವಾ ಶ್ರೀರಾಮುಲು ಅವರನ್ನು ನೇಮಿಸಲಿದೆ. ಉಪಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕವಷ್ಟೇ ಈ ಬಗ್ಗೆ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸವದಿಯವರು ಎಂಎಲ್ಎ ಅಥವಾ ಎಂಎಲ್'ಸಿ ಆಗಿರಲಿದ್ದಾರೆ. ಇದರಂತೆ ಬಹುನಿರೀಕ್ಷಿತ ಉಪಚುನಾವಣಾ ಫಲಿತಾಂಶ ಸೋಮವಾರ ಪ್ರಕಟಗೊಳ್ಳಲಿದ್ದು, ಇದೀಗ ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT