ಬಿಜೆಪಿ ನಾಯಕರು 
ರಾಜಕೀಯ

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದ ಅಭ್ಯುದಯಕ್ಕೆ ಪೂರಕ: ಕಟೀಲ್

ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕಾಗಿ ಮತ್ತು ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಬಲಪಡಿಸಲು ಮಹತ್ವದ ತೀರ್ಪು ನೀಡಿದ ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಸ್ಥಿರ ಸರ್ಕಾರಕ್ಕಾಗಿ ಮತ್ತು ಕೇಂದ್ರದ ನರೇಂದ್ರಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ ಬಲಪಡಿಸಲು ಮಹತ್ವದ ತೀರ್ಪು ನೀಡಿದ ರಾಜ್ಯದ ಮತದಾರರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರದಲ್ಲಿ ನರೇಂದ್ರ ಮೋದಿ  ಮತ್ತು  ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಗಳನ್ನು ಜನ ಬಲಿಸಿರುವುದು ಈ ಚುನಾವಣೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ಮಹತ್ವದ ಕಾಲಘಟ್ಟದಲ್ಲಿ ಮತದಾರರು ಬಿಜೆಪಿ ಸರ್ಕಾರವನ್ನು ಬಲಪಡಿಸಿದ್ದಾರೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳು ಅಧಿಕಾರದಲ್ಲಿರುವುದರಿಂದ ರಾಜ್ಯದ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ನರೇಂದ್ರಮೋದಿ ನೇತೃತ್ವದ ಕೇಂದ್ರದಲ್ಲಿನ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಜನಕಲ್ಯಾಣ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠನಗೊಳಿಸಲು, ರಾಜ್ಯಕ್ಕೆ ಅಗತ್ಯ ಅನುದಾನ ತರಲು ಈ ಫಲಿತಾಂಶ ಸಹಕಾರಿಯಾಗಲಿದೆ. ಸಿಲಿಕಾನ್‌ಸಿಟಿ ಬೆಂಗಳೂರಿನಲ್ಲಿ ಮೂಲ ಸೌಕರ್ಯ ಹೆಚ್ಚಿಸಿ, ಭವಿಷ್ಯದ ನಗರವನ್ನಾಗಿ ರೂಪಿಸುವ ಆಶಯ ಈಡೇರಲು ಪೂರಕ ವಾತಾವರಣ ಸೃಷ್ಟಿಯಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT