ಸಂಗ್ರಹ ಚಿತ್ರ 
ರಾಜಕೀಯ

ಉಪಚುನಾವಣೆ ಫಲಿತಾಂಶ: 12 ಕ್ಷೇತ್ರಗಳಲ್ಲಿ ಅರಳಿದ ಕಮಲ- ಬಿಎಸ್'ವೈ ಸರ್ಕಾರ ಸೇಫ್, ಜೆಡಿಎಸ್ 'ಭದ್ರಕೋಟೆ' ಛಿದ್ರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ.  

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದೇ ಹೇಳಲಾಗುತ್ತಿದ್ದ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. 

ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. 

ಯಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಅವರು ಗೆಲುವು ಸಾಧಿಸಿದ್ದಾರೆ. 

ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡ ಹಾಗೂ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿ.ವೈ.ಘೋರ್ಪಡೆ ಹಾಗೂ ಜೆಡಿಎಸ್ ಅಭ್ಯರ್ಥಿ ಎನ್.ಎಂ.ನಬಿ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಅಂಜನಪ್ಪ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು ಅವರು, ಕಾಂಗ್ರೆಸ್ ಅಭ್ಯರ್ಥಿ ಎಂ.ನಾರಾಯಣ ಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. 

ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೋಪಾಲಯ್ಯಅವರು ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಹಾಗೂ ಜೆಡಿಎಸ್ ಅಭ್ಯರ್ಥಿ ಕಾಂತರಾಜು ವಿರುದ್ಧ ಗೆಲವು ಸಾಧಿಸಿದ್ದಾರೆ. 

ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ಅಭ್ಯರ್ಥಿ ಅಶೋಕ್ ಪೂಜಾರಿ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಅವರು ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ ಕಾಗೆ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರು ಜೆಡಿಎಸ್ ಅಭ್ಯರ್ಥಿ ದೇವರಾಜ್ ಬಿಎಲ್ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಇನ್ನು ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿಯವರು ಕಾಂಗ್ರೆಸ್ ಅಭ್ಯರ್ಥಿ ಜಿ.ಬಿ.ಮಂಗ್ಸೂಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್'ಟಿ. ಸೋಮಶೇಖರ್ ಅವರು ಜೆಡಿಎಸ್ ಅಭ್ಯರ್ಥಿ ಟಿ.ಎನ್.ಜವರಾಯಿಗೌಡ ವಿರುದ್ಧ ಗೆಲುವು ಸಾಧಿಸಿದ್ದಾರೆ. 

ಶಿವಾಜಿನಗರ ಹಾಗೂ ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ರಿಜ್ವಾನ್ ಅರ್ಷದ್ ಹಾಗೂ ಹೆಚ್.ಪಿ.ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ. 

ಇನ್ನು ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT