ರಾಜಕೀಯ

ಮಹಾರಾಷ್ಟ್ರ ಉದಾಹರಣೆ ನೀಡಿ ಚುನಾವಣೋತ್ತರ ಸಮೀಕ್ಷಾ ವರದಿ ತಿರಸ್ಕರಿಸಿದ ಸಿದ್ದು

Manjula VN

ಬೆಳಗಾವಿ: ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆ ವೇಳೆ ಚುನಾವಣೋತ್ತರ ಸಮೀಕ್ಷಾ ವರದಿ ಏನಾಯಿತು? ಇವೆಲ್ಲಾ ಊಹಾಪೋಹವಷ್ಟೇ ಎಂದು ಹೇಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಉಪಚುನಾವಣೆ ಕುರಿತ ಚುನಾವಣೋತ್ತರ ಸಮೀಕ್ಷಾ ವರದಿಯನ್ನು ತಿರಸ್ಕರಿಸಿದ್ದಾರೆ. 

ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಪಕ್ಷದ ನಿರೀಕ್ಷೆಗಳೆಲ್ಲಾ ಹುಸಿಯಾಗಲಿವೆ ಎಂಬ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಈ ಇಬ್ಬರೂ ನಾಯಕರೂ ತಮ್ಮದೇ ಆದ ಊಹಾತ್ಮಕ ಪ್ರಪಂಚದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಂತ್ಯಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಅವರು ಮಾತನಾಡುತ್ತಲೇ ಇರುತ್ತಾರೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ನಾನೆಂದರೆ ಭಯವಿದೆ. ಬಿಜೆಪಿ ನನ್ನನ್ನು ನೋಡಿ ಹೆದರುತ್ತಿರುವುದನ್ನು ನಾನು ಖುಷಿ ಪಡುತ್ತಿದ್ದೇನೆಂದು ಹೇಳಿದ್ದಾರೆ. '

ಆರ್ಥಿಕತೆ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯವನ್ನು ಸರಿಯಾಗಿ ನಡೆಸಿಲ್ಲ. ಸರ್ಕಾರಿ ನೌಕರರಿಗೆ ಸರಿಯಾಗಿ ವೇತನ ಬಿಡುಗಡೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ. 

SCROLL FOR NEXT