ರಾಜಕೀಯ

ಪೌರತ್ವ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾ- ಸಿದ್ದರಾಮಯ್ಯ ಟೀಕೆ 

Sumana Upadhyaya

ಬೆಂಗಳೂರು: ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನ‌ಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.


ದ್ವಿರಾಷ್ಟ್ರ ಸಿದ್ದಾಂತವನ್ನು ಪ್ರತಿಪಾದಿಸಿದ್ದ ಬಿಜೆಪಿಯ ಮೂಲ ಪುರುಷರ ಆಶಯವನ್ನು ಕೇಂದ್ರ ಸರ್ಕಾರ ಈಡೇರಿಸಲು ಹೊರಟಿರುವುದು ಸ್ಪಷ್ಟ. ದೇಶ ಒಡೆಯಲು ಹೊರಟಿರುವ ಬಿಜೆಪಿ ಸಂಚಿನ ವಿರುದ್ದ ಜಾತ್ಯತೀತ ಭಾರತ ಸಂಘಟಿತವಾಗಬೇಕು ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.


ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ. ಈ ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ ಇದೆಯೇ ಹೊರತು ವಲಸೆ ಸಮಸ್ಯೆಯನ್ನು ಪರಿಹರಿಸುವ ಸದುದ್ದೇಶ ಖಂಡಿತ ಇಲ್ಲ ಎಂದು ಅವರು ಟೀಕಿಸಿದ್ದಾರೆ.

SCROLL FOR NEXT