ರಾಜಕೀಯ

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು: ಸಿಲಿಕಾನ್ ಸಿಟಿ ಕಸದ ಸಮಸ್ಯೆ ದೂರಾಗಿಸುವ ಭರವಸೆ ನೀಡಿದ ಸಿಎಂ

Manjula VN

ಬೆಂಗಳೂರು: ರಾಜ್ಯ ಸರ್ಕಾರ ಅಳಿವು-ಉಳಿವಿನ ಪ್ರಶ್ನೆಯಾಗಿದ್ದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿನ ಖುಷಿಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಗರಕ್ಕೆ ತಲೆದೋರಿರುವ ಕಸದ ಸಮಸ್ಯೆಗೆ ಅಂತ್ಯ ಹಾಡುವುದಾಗಿ ಭರವಸೆ ನೀಡಿದ್ದಾರೆ. 

ಈ ಬಾರಿಯ ಉಪಚುನಾಣೆಯಲ್ಲಿ ನಗರದ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಶಿವಾಜಿನಗರವನ್ನು ಹೊರತುಪಡಿಸಿದರ, ಯಶವಂತಪುರ, ಕೆ.ಆರ್.ಪುರಂ ಹಾಗೂ ಮಹಾಲಕ್ಷ್ಮೀ ಲೇಔಟ್ ನಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 

ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಅವರು, ನಗರದಲ್ಲಿ ತಲೆದೋರಿರುವ ಕಸದ ಸಮಸ್ಯೆಯನ್ನು ದೂರಾಗಿಸಲು ಏನು ಮಾಡಬಹುದು ಎಂಬುದರ ಕುರಿತು ಈ ಹಿಂದೆ ನಡೆದ ಸಭೆಯಲ್ಲಿಯೇ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಅನ್ವಯ ಕಸವನ್ನು ತೆಗೆದುಕೊಂಡು ಹೋಗುವ ವಾಹನಗಳಿಗೆ ಜಿಪಿಎಸ್ ಗಳನ್ನು ಅಳವಡಿಸಲು ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 

ಜಿಪಿಎಸ್ ಅಳವಡಿಕೆಯಿಂದ ವಾಹನಗಳು ಎಷ್ಟು ಸಮಯಕ್ಕೆ ಸ್ಥಳಕ್ಕೆ ತೆರಳುತ್ತವೆ, ಎಷ್ಟು ಗಂಟೆಗೆ ಸ್ಥಳವನ್ನು ಬಿಡುತ್ತವೆ? ಯಾವ ಯಾವ ಪ್ರದೇಶಗಳಲ್ಲಿ ವಾಹನಗಳು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ತಿಳಿದುಕೊಳ್ಳಲು ಸಹಾಯಕವಾಗುತ್ತವೆ ಎಂದು ತಿಳಿಸಿದ್ದಾರೆ. 

ಘನತ್ಯಾಜ್ಯ ನಿರ್ವಹಣೆಗಾಗಿ ಸರ್ಕಾರ ಮೂರು ವರ್ಷಗಳ ಅವಧಿಗೆ ರೂ.900 ಕೋಟಿ ಬಿಡುಗಡೆ ಮಾಡಿದ. ಶೀಘ್ರದಲ್ಲಿಯೇ ಟೆಂಡರ್ ಕರೆಯಲು ಸಿದ್ಧತೆಗಳೂ ನಡೆಯುತ್ತಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಡಿ ಹೇಳಿದ್ದಾರೆ. 

SCROLL FOR NEXT