ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಮ್ಮ ಮೇಲಿರುವ ಖಾತೆಗಳ ಭಾರ ಇಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹೊಸದಾಗಿ ಚುನಾಯಿತರಾಗಿರುವ ಶಾಸಕರಿಗೆ ತಮ್ಮ ಬಳಿಯಿರುವ ಹೆಚ್ಚುವರಿ ಖಾತಿ ಹಂಚಿಕೆ ಮಾಡು ಯಡಿಯೂರಪ್ಪ ತೀರ್ಮಾನಿಸಿದ್ದಾರೆ.
ಹಣಕಾಸು, ಜಲ ಸಂಪನ್ಮೂಲ, ಇಂಧನ, ನಗರಾಭಿವೃದ್ಧಿ, ಮಾಹಿತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜವಾಬ್ದಾರಿ ಸಿಎಂ ಮೇಲಿತ್ತು, ಜೊತೆಗೆ ಹಲವು ಹಿರಿಯ ಸಚಿವರಿಗೂ ಕೂಡ ಪ್ರಮುಖ ಖಾತೆ ಜೊತೆಗೆ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿತ್ತು. ಯಾರಿಗೆ ಯಾವ ಖಾತೆ ನೀಡಬೇಕು ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ. ಆದರೆ ಕೇಂದ್ರ ನಾಯಕರುಗಳ ನಿರ್ಧಾರವೇ ಅಂತಿಮ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
ಶನಿವಾರ ಸಿಎಂ ದೆಹಲಿಗೆ ತೆರಳುವ ಸಾಧ್ಯತೆಯಿದೆ, ಕೇಂದ್ರ ನಾಯಕರ ಸೂಚನೆ ಮೇರೆಗೆ ಯಡಿಯೂರಪ್ಪ ಸಂಪುಟ ವಿಸ್ತರಣೆ ನಡೆಯಲಿದೆ, ಸದ್ಯ ಹಾಲಿ ಸಚಿವರ ಸ್ಥಾನಕ್ಕೆ ಯಾವುದೇ ತೊಂದರೆ ಬಾರದ ರೀತಿಯಲ್ಲಿ ನೂತನ ಶಾಸಕರಿಗೆ ಖಾತೆ ಹಂಚಿಕೆ ಮಾಡುವುದು ಸದ್ಯ ಯಡಿಯೂರಪ್ಪ ಅವರ ಮುಂದಿರುವ ದೊಡ್ಡ ಸವಲಾಗಿದೆ ಎಂದು ಹೆಸರು ಬಹಿರಂಗ ಪಡಿಸಲು ಇಚ್ಚಿಸದ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.