ರಾಜಕೀಯ

ಮುಖ್ಯಮಂತ್ರಿ ಜೊತೆ ಮುನಿಸು: ಸಭೆ, ಸಮಾರಂಭಗಳಿಂದ ದೂರ ಉಳಿದ ಶ್ರೀರಾಮುಲು

Nagaraja AB

ಬೆಂಗಳೂರು : ಉಪ ಚುನಾವಣೆ ನಂತರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಬರೋಬ್ಬರಿ ನಾಲ್ಕು ಜನ ಆಕಾಂಕ್ಷಿಗಳು ಲಾಭಿ ನಡೆಸುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ತಲೆನೋವಿಗೆ ಕಾರಣವಾಗಿದೆ 

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾರಣರಾಗಿದ್ದ ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ ,  ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ  ಕೆ.ಎಸ್. ಈಶ್ವರಪ್ಪ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. 

ಈ ಮಧ್ಯೆ ತಮ್ಮನ್ನು ಉಪಮುಖ್ಯಮಂತ್ರಿ ಮಾಡದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮುಖ್ಯಮಂತ್ರಿ‌ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಮುನಿಸಿಕೊಂಡಿದ್ದಾರೆ. 

ಶ್ರೀರಾಮುಲು ಅವರ ನಡವಳಿಕೆ ಇದಕ್ಕೆ ಪುಷ್ಟಿ ನೀಡುತ್ತಿದೆ‌. ತಮ್ಮ ಇಲಾಖೆ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾಗವಹಿಸುವ ಕಾರ್ಯಕ್ರಮಗಳಿಂದ ರಾಮುಲು ದೂರ ಉಳಿದಿದ್ದಾರೆ. 

ಸಕಾರಣವೇ ಇಲ್ಲದೇ ಕಾರ್ಯಕ್ರಮಗಳಿಂದ ದೂರ ಉಳಿದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.ಉಪ ಚುನಾವಣೆಯಲ್ಲಿ ಭಾರೀ ಗೆಲುವು ದೊರೆತಿದ್ದರೂ ಸಹ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶ್ರೀರಾಮುಲು ಅಭಿನಂದನೆ ಸಲ್ಲಿಸಿಲ್ಲ. ಈಚೆಗೆ ನಡೆದ ನಾಲ್ಕು ಪ್ರಮುಖ ಕಾರ್ಯಕ್ರಮಗಳಿಂದಲೂ ದೂರ ಉಳಿದಿದ್ದರು.

SCROLL FOR NEXT