ರಾಜಕೀಯ

ಅರವತ್ತು ತುಂಬುತ್ತಿರುವ ಕುಮಾರಸ್ವಾಮಿಗೆ ಶುಭವಾಗಲಿ-ನಾರಾಯಣಗೌಡ 

Nagaraja AB

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರ ಸ್ವಾಮಿ ಅವರಿಗೆ 60 ವರ್ಷ ತುಂಬುತ್ತಿದ್ದು, ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಕೆ.ಆರ್ .ಪೇಟೆ ನೂತನ ಬಿಜೆಪಿ ಶಾಸಕ ನಾರಾಯಣಗೌಡ ಹೇಳಿದ್ದಾರೆ

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರ ಸ್ವಾಮಿ ಅವರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಈಗ ಹಿರಿಯ ನಾಗರಿಕರಾಗುತ್ತಿದ್ದು, ಅವರಿಗೆ ಶುಭ ಕೋರುತ್ತೇನೆ ಎಂದರು. 

ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಗಳ ಮದುವೆಯಲ್ಲಿ ನಿರತರಾಗಿದ್ದಾರೆ. ಅವರು ಬಂದ ನಂತರ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುತ್ತೇವೆ. ಇಷ್ಟೆಲ್ಲಾ ಒಳ್ಳೆಯದಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಒಳ್ಳೆಯ ಕೆಲಸಗಳು ನಡೆಯಲಿವೆ ಎಂದು ಆಶಯ ವ್ಯಕ್ತಪಡಿಸಿದರು. 

ತಮಗೆ ಸಚಿವ ಸಂಪುಟದಲ್ಲಿ ಯಾವುದೇ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ದ. ನಮಗೆ ಬಿಜೆಪಿ ನಾಯಕರು ಎಲ್ಲಾ ಶಕ್ತಿ ತುಂಬಿ ಗೆಲ್ಲಿಸಿದ್ದಾರೆ. ನಮ್ಮ ನೆರವಿಗೆ ಮುಖ್ಯಮಂತ್ರಿ ಅವರು ಬರಲಿದ್ದಾರೆ ಎಂದರು. 

ಶ್ರೀರಾಮುಲು ಅಥವಾ ರಮೇಶ್ ಜಾರಕಿಹೊಳಿ ಪೈಕಿ ಯಾರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬಗ್ಗೆ ನಾವು ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿ ಅವರ ವಿವೇಚನೆಗೆ ಬಿಟ್ಡ ವಿಷಯ ಎಂದರು. 

ಚುನಾವಣೆಯಲ್ಲಿ ಪರಾಭವಗೊಂಡಿರುವ ಎಂ.ಟಿ.ಬಿ. ನಾಗರಾಜ್ ಹಾಗೂ ಎಚ್. ವಿಶ್ವನಾಥ್ ಅವರ ಜೊತೆ ನಾವಿದ್ದೇವೆ. ನಮ್ಮ ಈ ಇಬ್ಬರು ನಾಯಕರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಇದನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ಕೂಡ ತಂದಿದ್ದೇವೆ ಎಂದರು.

SCROLL FOR NEXT