ಸಾಂದರ್ಭಿಕ ಚಿತ್ರ 
ರಾಜಕೀಯ

ಉಪ ಚುನಾವಣೆ ಗೆಲುವು: ಯಡಿಯೂರಪ್ಪಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ರಲ್ಲಿ ಗೆದ್ದು ಅಭೂತಪೂರ್ವ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರಮೋದಿ ಅಭಿನಂದಿಸಿದ್ದಾರೆ

ಬೆಂಗಳೂರು: ರಾಜ್ಯ ವಿಧಾನಸಭೆಯ 15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ರಲ್ಲಿ ಗೆದ್ದು ಅಭೂತಪೂರ್ವ ಗೆಲುವು ಸಾಧಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪ್ರಧಾನಿ ನರೇಂದ್ರಮೋದಿ ಅಭಿನಂದಿಸಿದ್ದಾರೆ

ಇಂದು ಬೆಳಗ್ಗೆ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ನರೇಂದ್ರ ಮೋದಿ, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಮಹತ್ವದ ಸಂಗತಿ. ಮೊದಲೇ ಕರೆ ಮಾಡಿ ಅಭಿನಂದನೆ ಹೇಳಬೇಕಿತ್ತು. ಆದರೆ ನಾನಾ ಕೆಲಸ ಕಾರ್ಯಗಳ ಒತ್ತಡಗಳಿಂದ ಸಾಧ್ಯವಾಗಲಿಲ್ಲ ಎಂದಿದ್ದಾರೆ.

ರಾಜ್ಯದ ತೆರಿಗೆ ಸಂಗ್ರಹ, ಅಭಿವೃದ್ಧಿ ಕುರಿತು ಮುಖ್ಯಮಂತ್ರಿ ಅವರಿಂದ ಮಾಹಿತಿ ಪಡೆದ ಮೋದಿ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ  ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ಆದಷ್ಟು ಬೇಗ ರಾಜ್ಯದ ಸರಕು ಮತ್ತು ಸೇವಾ ತೆರಿಗೆ ಜಿ.ಎಸ್.ಟಿ ಪಾಲು ಕೊಡುವುದಾಗಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ, 
 
ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಮಾಹಿತಿ ಪಡೆದರು. ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಈ ಬಗ್ಗೆ ಪ್ರತಿಪಕ್ಷಗಳು ಅಪ ಪ್ರಚಾರ ನಡೆಸುತ್ತಿದ್ದು, ಇದಕ್ಕೆ ತಕ್ಕ ಉತ್ತರ ನೀಡಬೇಕು ಎಂದು  ಸಲಹೆ ನೀಡಿದ್ದಾರೆ.
 
ಈ ಮಧ್ಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದ ಬಿ.ವೈ. ವಿಜಯೇಂದ್ರ ನಗರಕ್ಕೆ ಆಗಮಿಸಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ಸಂಪುಟ ವಿಸ್ತರಣೆ, ಸುಗಮವಾಗಿ ಸರ್ಕಾರ ನಡೆಸಲು ಅಮಿತ್ ಶಾ ನೀಡಿರುವ ಸಲಹೆಗಳನ್ನು ಯಡಿಯೂರಪ್ಪ ಅವರ ಗಮನಕ್ಕೆ ತಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ