ಎಚ್.ಎಂ. ರೇವಣ್ಣ 
ರಾಜಕೀಯ

ಬಿಜೆಪಿಯಲ್ಲಿ ಬೆಂಕಿ ಬಿದ್ದಿದೆ, ಇನ್ನಷ್ಟು ವ್ಯಾಪಿಸಲಿದೆ : ಎಚ್.ಎಂ. ರೇವಣ್ಣ

 ಉಪ ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಬಿಜೆಪಿಯಲ್ಲಿ ಸದ್ಯ ಬೆಂಕಿ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ವ್ಯಾಪಿಸಲಿದೆ ಎಂದು ಮಾಜಿ ಸಚಿವ ಹೆಚ್ ಎಂ ರೇವಣ್ಣ ಹೇಳಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ಬಿಜೆಪಿಯಲ್ಲಿ ಸದ್ಯ ಬೆಂಕಿ ಬಿದ್ದಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ವ್ಯಾಪಿಸಲಿದೆ ಎಂದು ಮಾಜಿ ಸಚಿವ ಹೆಚ್ ಎಂ ರೇವಣ್ಣ ಹೇಳಿದ್ದಾರೆ.
 
 ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಅಸಮಧಾನ ಸ್ಪೋಟವಾಗಿದೆ. ಉಮೇಶ್ ಕತ್ತಿ ಈಗಾಗಲೇ ಕತ್ತಿ ಮಸೆಯುತ್ತಿದ್ದಾರೆ. ಶ್ರೀರಾಮುಲು  ಕ್ಯಾಬಿನೆಟ್ ಸೇರಿದಂತೆ ಯಾವ ಸಭೆಗೂ ಹೋಗುತ್ತಿಲ್ಲ. ಇವರ ಕಥೆ ಇದಾದರೆ ಇದೀಗ ಶಾಸಕರಾಗಿ ಆಯ್ಕೆಯಾಗಿರುವವರು ಅಧಿಕಾರ ಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಅಧಿಕಾರ ಸಿಗದಿದ್ದರೆ ಮತ್ತೆ ಅವರು ತಮ್ಮ ಕೆಲಸ ಪ್ರಾರಂಭಮಾಡುತ್ತಾರೆ ಎಂದರು.  
 

ಹಳಬರಿಗೆ ಅವಕಾಶ ಮಾಡಕೊಂಡಬೇಕೆಂದು ಬಿಜೆಪಿ ವರಿಷ್ಠ ಬಿ.ಎಲ್. ಸಂತೋಷ್ ಹೇಳಿದ್ದಾರೆ. ತಕ್ಷಣಕ್ಕೆ ಏನೂ ಹೇಳಲು ಸಾಧ್ಯವಿಲ್ಲ.  ಜನರ ಅಭಿಪ್ರಾಯಕ್ಕೆ ನಾವು ಮನ್ನಣೆ ಕೊಡುತ್ತೇವೆ. ವಿರೋಧ ಪಕ್ಷದ ಕೆಲಸವನ್ನು ನಾವು ಮಾಡುತ್ತೇವೆ. ತಕ್ಷಣಕ್ಕೆ ಕಾಂಗ್ರೆಸ್ ಸರ್ಕಾರ ರಚಿಸುವ ಯಾವುದೇ ಪ್ರಯತ್ನ ಮಾಡುವುದಿಲ್ಲ ಎಂದು ಹೇಳಿದರು.
 
 ಸಿದ್ದರಾಮಯ್ಯ ಆರೋಗ್ಯವಾಗಿದ್ದು, ಲವಲವಿಕೆಯಿಂದ ಎಲ್ಲರನ್ನೂ ಮಾತನಾಡುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಅವರ ಭೇಟಿಗೆ ಜನ ಬರುತ್ತಿದ್ದಾರೆ. ಎಷ್ಟು ಅಗತ್ಯವೋ ಅಷ್ಟು ಮಾತನಾಡುತ್ತಿದ್ದಾರೆ. ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ. ಒತ್ತಡ ತೆಗೆದುಕೊಳ್ಳಬೇಡಿ ಎಂದು ಸೂಚಿಸಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!