ಸಿದ್ದರಾಮಯ್ಯ 
ರಾಜಕೀಯ

ಇಂದಿರಾ ಕ್ಯಾಂಟೀನ್‌ಗೆ ವಾಲ್ಮೀಕಿ ಹೆಸರು: ವಾಲ್ಮೀಕಿ‌ ಹೆಸರನ್ನು ರಾಜಕೀಯಕ್ಕೆ ಬಳಸಬೇಡಿ, ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್ ಗಳಿಗೆ ಐತಿಹಾಸಿಕ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿ ಗೆ ಅವಮಾನ ಮಾಡಲಾಗುತ್ತಿದೆ...

ಬೆಂಗಳೂರು: ಇಂದಿರಾ ಕ್ಯಾಂಟೀನ್ ಗಳಿಗೆ ಐತಿಹಾಸಿಕ ಕವಿ ಮಹರ್ಷಿ ವಾಲ್ಮೀಕಿಯವರ ಹೆಸರು ಇಡುವ ಯೋಚನೆ ಇದೆಯಂತೆ. ಮಹರ್ಷಿ ವಾಲ್ಮೀಕಿಯವರ ಬಗ್ಗೆ ನಮಗೆಲ್ಲ ಅಪಾರವಾದ ಗೌರವ ಇದೆ. ಅವರ ಹೆಸರನ್ನು ಬಿಜೆಪಿ ತನ್ನ ಕ್ಷುಲಕ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಮಹಾಕವಿ ಗೆ ಅವಮಾನ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಗಳ  ಹೆಸರನ್ನು ಬದಲಾಯಿಸಲು ಹೊರಟಿರುವ ರಾಜ್ಯದ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಮತ್ತು ಇಂತಹ ಕ್ಷುಲಕ ರಾಜಕಾರಣ ವನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಿ ಮಹರ್ಶಿ ವಾಲ್ಮೀಕಿ ಅನ್ನ ಕುಟೀರ ಎಂದು ಮರು ನಾಮಕರಣ ಮಾಡುವಂತೆ ಮಾಜಿ ಸಚಿವ ರಾಜೂಗೌಡ ಅವರು ಮನವಿ ಮಾಡಿದ್ದಾರೆ‌. ಅವರ ಮನವಿಯನ್ನು ಪರಿಶೀಲಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಚರ್ಚಿಸಿ ಬೆಂಗಳೂರು ಹೊರತು ಪಡಿಸಿ ರಾಜ್ಯದ ಉಳಿದ ಸ್ಥಳಗಳಲ್ಲಿ ಹೆಸರು ಬದಲಾವಣೆ ಮಾಡಲು ಚಿಂತನೆ ಮಾಡಲಾಗುವುದು ಎಂದು ಅಶೋಕ್ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT