ದೇಶದಲ್ಲಿ ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ: ನಳಿನ್ ಕುಮಾರ್ ಕಟೀಲ್
ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗ: ಪೌರತ್ವ ಕಾಯ್ದೆ ವಿರುದ್ಧ ಕೇವಲ ಕಾಂಗ್ರೆಸಿಗರು ಮಾತ್ರ ಹೋರಾಟ ಮಾಡುತ್ತಿದ್ದಾರೆ. ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆಯಿಂದ ಮುಸ್ಲಿಮರಿಗೆ ಧಕ್ಕೆಯಿಲ್ಲ. ದೇಶದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿಲ್ಲ. ಪೌರತ್ವ ಕಾಯ್ದೆಯನ್ನು ಅಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದು, ರಾಜಕೀಯವಾಗಿ ಆಡವಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಕಳೆದ 6 ವರ್ಷದಿಂದ ಕಾಂಗ್ರೆಸ್ಗೆ ಯಾವ ವಿಷಯಗಳು ಸಿಕ್ಕಿರಲಿಲ್ಲ. ಈಗ ಪೌರತ್ವ ಕಾಯ್ದೆ ವಿಚಾರವಾಗಿ ದೇಶದಲ್ಲಿ ಬೆಂಕಿಹೊತ್ತಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಕಾಂಗ್ರೆಸ್ ಬೌದ್ದಿಕವಾಗಿ, ವೈಚಾರಿಕ, ಸಂಘಟನಾತ್ಮಕವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳಲು ಈ ಕಾಯ್ದೆಯನ್ನಿಟ್ಟುಕೊಂಡು ತಂತ್ರಗಾರಿಕೆ ನಡೆಸುತ್ತಿದೆ ಎಂದು ಟೀಕಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.