ಬಸವರಾಜ ಹೊರಟ್ಟಿ 
ರಾಜಕೀಯ

ಮತ್ತೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿದ ಬಸವರಾಜ ಹೊರಟ್ಟಿ! ಗರಿಗೆದರಿದ ಕುತೂಹಲ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಹಿರಿಯ ನಾಯಕ ಬಸವರಾಜ್ ಹೊರಟ್ಟಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇತ್ತೀಚೆಗಷ್ಟೇ ಜ್ಞಾನಜ್ಯೋತಿ ಸಭಾಂಗಣದ ಬಳಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಂಗಳವಾರ ಶಕ್ತಿ ಭವನದಲ್ಲಿ ಮತ್ತೊಮ್ಮೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. 

ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಬಸವರಾಜ್ ಹೊರಟ್ಟಿ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ.

ಆದರೆ, ಇದನ್ನು ತಳ್ಳಿಹಾಕಿದ ಬಸವರಾಜ್ ಹೊರಟ್ಟಿ ಅವರು ಅಭಿವೃದ್ಧಿ ಕಾರ್ಯಗಳ ಸಂಬಂಧ ಭೇಟಿ ಮಾಡಲಾಗಿದೆಯೇ ಹೊರತು, ಪಕ್ಷ ತೊರೆಯುವಂತಹ ನಿರ್ಧಾರ ಮಾಡಿಲ್ಲ. ಅಭಿವೃದ್ಧಿ ಕೆಲಸ ಕುರಿತು ಚರ್ಚೆ ನಡೆಸುವ ಸಂಬಂಧ ಆಗಾಗ್ಗೆ ಭೇಟಿ ಮಾಡುತ್ತಿದ್ದು, ರಾಜಕೀಯ ಸೇರಿಸುವುದು ಸೂಕ್ತವಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!