ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ 
ರಾಜಕೀಯ

ಕೆಲವು ಸಚಿವರಿಗೆ ಕೊಕ್‌ ಸಾಧ್ಯತೆ ಹಿನ್ನೆಲೆ: ಮುಖ್ಯಮಂತ್ರಿಯನ್ನು ಭೇಟಿಯಾದ ಶಶಿಕಲಾ ಜೊಲ್ಲೆ, ನಿರಾಣಿ

ಶಾಸಕ ಮುರುಗೇಶ್ ನಿರಾಣಿ ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬೆಂಗಳೂರು: ಶಾಸಕ ಮುರುಗೇಶ್ ನಿರಾಣಿ ಇಂದು ಬೆಳಗ್ಗೆ ಡಾಲರ್ಸ್ ಕಾಲೋನಿಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿರುವ ಅವರು, ಸಚಿವ ಸ್ಥಾನಕ್ಕಾಗಿ ಬೇಡಿಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಬಿಎಸ್ ವೈ ಸಂಪುಟದಲ್ಲಿ ಕಿರಿಯ ಸಚಿವರಿಗೆ ಕೋಕ್ ಎಂಬ ಸುದ್ದಿ ಬೆನ್ನಲ್ಲೇ  ಸಚಿವೆ ಶಶಿಕಲಾ ಜೊಲ್ಲೆ ಬೆಳಗ್ಗೆಯೇ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಸುಮಾರು ಅರ್ಧ ಗಂಟೆ ಕಾಲ ಮುಖ್ಯಮಂತ್ರಿಯೊಂದಿಗೆ ಸಚಿವೆ ಮಾತುಕತೆ ನಡೆಸಿದರು.

ಸಂಕ್ರಾಂತಿ ನಂತರ ರಾಜ್ಯ ಮಂತ್ರಿ ಮಂಡಲದಲ್ಲಿ ಭಾರೀ ಬದಲಾವಣೆ ಸಾಧ್ಯತೆ ಇದ್ದು, ಕೆಲವು ಹಾಲಿ ಸಚಿವರಿಗೆ ಕೊಕ್‌ ಕೊಡುವ ಸಾಧ್ಯತೆ ಹಿನ್ನೆಲೆಯಲ್ಲಿ ಶಶಿಕಲಾಜೊಲ್ಲೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ವಹಿಸಿಕೊಟ್ಟ ಇಲಾಖೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡದ ಕೆಲವು ಸಚಿವರನ್ನು ಬದಲಾಯಿಸುವ ಅಥವಾ ಅವರಿಗೆ ಬೇರೆ ಖಾತೆ ಕೊಡುವ ಸಾಧ್ಯತೆಯೂ ಇದೆ. ಕೆಲವು ಹಿರಿಯರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕಾದ ಅನಿವಾರ್ಯತೆ ಇರುವುದರಿಂದ ಕಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ. ಒಂದು ಅಂದಾಜಿನ ಪ್ರಕಾರ 3ರಿಂದ 4 ಸಚಿವರಿಗೆ ಕೊಕ್‌ ಕೊಡುವ ಇರಾದೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT