ಇಬ್ರಾಹಿಂ 
ರಾಜಕೀಯ

'ಮಹಿಷಿ ನಮ್ಮ ಮನೆ ದೇವರು, ಹಸು ಹೊರಗಡೆಯಿಂದ ತಂದಿದ್ದು; ಸಿಎಎ ಅವಶ್ಯಕತೆ ಇರಲಿಲ್ಲ'

ಪೌರತ್ವ ತಿದ್ದುಪಡಿ ಕಾಯಿದೆ ಯಾರಿಗೂ ಅವಶ್ಯಕತೆಯೇ ಇರಲಿಲ್ಲ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ಯಾರಿಗೂ ಅವಶ್ಯಕತೆಯೇ ಇರಲಿಲ್ಲ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಸ್ಪಷ್ಟಪಡಿಸಿದ್ದಾರೆ.

ಪುರಭವನ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶ ಆರ್ಥಿಕ ವ್ಯವಸ್ಥೆ ಸರಿಪಡಿಸುವ ಬಗ್ಗೆ‌ ಕೇಂದ್ರ‌ ಮೊದಲು ಗಮನ ಹರಿಸಲಿ. ನಮಗೆ ಅನ್ನ ಸಿಗುತ್ತಿಲ್ಲ. ಈಗ ಬೇರೆ ಕಡೆಯಿಂದ ಜನರನ್ನು ಕರೆದುಕೊಂಡು ಬಂದು ಪೌರತ್ವ ಕೊಡುತ್ತೇವೆ ಎನ್ನುತ್ತಿದ್ದಾರೆ. ಮೊದಲು ನಮಗೆ ಅನ್ನ ಕೊಡಿ ಎಂದರು.

ಪಾಕಿಸ್ತಾನ, ಬಾಂಗ್ಲಾದೇಶದ ಹಿಂದೂಗಳಿಗೆ ಪೌರತ್ವ ಕೊಡುವುದಕ್ಕೆ ತಮ್ಮ ವಿರೋಧ ಇಲ್ಲ. ನನಗೆ ಎಷ್ಟು ಜನ ಮಕ್ಕಳ ಇದ್ದಾರೆ ಎನ್ನುವುದಾಗಲಿ ಅವರೆಲ್ಲ ಯಾವ ತರಗತಿಯಲ್ಲಿ ಓದುತ್ತಿದ್ದಾರೆ ಎಂದು ಗೊತ್ತಿಲ್ಲ. ಈಗ ನೀ ಎಲ್ಲಿ ಹುಟ್ಟಿದ್ದೆ ನಿಮ್ಮ ಅಪ್ಪ ಯಾರು? ನಿಮ್ಮ ಅಮ್ಮ ಯಾರು? ಎಂದು ದಾಖಲೆ ಕೇಳಿದರೆ ದಾಖಲೆ ಕೊಡಲು ಸಾಧ್ಯವೇ?

ಮಹಿಷಿ ನಮ್ಮ ಮನೆ ದೇವರು. ಹಸು ಹೊರಗಡೆಯಿಂದ ತಂದಿದ್ದು, ಜನರಿಗೆ ತಿನ್ನಲು ಅನ್ನ ಕೊಡಿ, ಹದಗೆಟ್ಟಿರುವ ಆರ್ಥಿಕ ಸ್ಥಿತಿ ಸರಿ ಪಡಿಸಲು ಪ್ರಧಾನಿ ಮೋದಿ ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್