ಮಧುಸೂದನ್ ಮಿಸ್ತ್ರಿ 
ರಾಜಕೀಯ

'ಕಾಂಗ್ರೆಸ್ ನಾಯಕತ್ವ ಆಯ್ಕೆ ಬಗ್ಗೆ ವೀಕ್ಷಕರಿಂದ ಅಭಿಪ್ರಾಯ ಸಂಗ್ರಹ'

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಎಐಸಿಸಿ ವೀಕ್ಷಕರು ಸಲಹೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಹಿಂಪಡೆಯುವಂತೆ ಎಐಸಿಸಿ ವೀಕ್ಷಕರು ಸಲಹೆ ನೀಡಿ, ಪ್ರತಿಪಕ್ಷ ನಾಯಕನಾಗಿ ಮುಂದುವರಿಯುವಂತೆ ಮನವಿ ಮಾಡಿದ್ದಾರೆ.

ಹಿರಿಯ ನಾಯಕರು ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಸಿ, ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಬೇರೆಯವರಿಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ಉದ್ಭವಿಸಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಎಐಸಿಸಿ ವೀಕ್ಷಕರಾಗಿ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂಧನ ಮಿಸ್ತ್ರಿ ಹಾಗೂ ಎಐಸಿಸಿ ಕಾರ್ಯದರ್ಶಿ ಭಕ್ತ ಚರಣ ದಾಸ್ ಅವರು ರಾಜ್ಯದ 50 ಹಿರಿಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಕಳೆದ ಬಾರಿ ಪ್ರತಿಪಕ್ಷ ನಾಯಕನ ಆಯ್ಕೆ ಸಂದರ್ಭದಲ್ಲಿ ಎಲ್ಲರನ್ನು ಒಟ್ಟಿಗೇ ಕರೆದು ಅಭಿಪ್ರಾಯ ಸಂಗ್ರಹಿಸಲು ಆಗಮಿಸಿದ ಸಂದರ್ಭದಲ್ಲಿ ಕೆಲವರು ತಂಡವಾಗಿ ಸಿದ್ದರಾಮಯ್ಯ ಪರ ಸಹಿ ಸಂಗ್ರಹ ಮಾಡಿ ವೀಕ್ಷಕರಿಗೆ ನೀಡಿದ್ದ ಬಗ್ಗೆ ರಾಜ್ಯ ನಾಯಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಬಾರಿ ಪ್ರತಿಯೊಬ್ಬ ನಾಯಕರಿಂದ ಪ್ರತ್ಯೇಕ ಅಭಿಪ್ರಾಯ ಪಡೆದುಕೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಬಲಗೊಳ್ಳಬೇಕಾದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವಾಗಬೇಕು. ಈ ಹಿನ್ನೆಲೆಯಲ್ಲಿ ಎಲ್ಲ ಸಮುದಾಯಗಳ ನಾಯಕರಿಗೂ ಅಧಿಕಾರ ಹಂಚಿಕೆಯಾಗಬೇಕು ಎಂದು ಎಐಸಿಸಿ ವೀಕ್ಷಕರ ಎದುರು ಬಹುತೇಕ ರಾಜ್ಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!