ಜಿ.ಟಿ ದೇವೇಗೌಡ 
ರಾಜಕೀಯ

ಸಾರಾ ಮಹೇಶ್  ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡುತ್ತಾರೆ!

ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

ಮೈಸೂರು: ಮೈಸೂರಿನಲ್ಲಿ ಸಾರಾ ಮಹೇಶ್ ಅವರು ಏನು ಹೇಳುತ್ತಾರೋ, ಕುಮಾರಸ್ವಾಮಿ ಅವರು ಅದನ್ನೇ ಮಾಡಿಕೊಂಡು ಬರುತ್ತಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಸ್ಥಾನಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಸದ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಾಲಿಕೆಯಲ್ಲಿ ಆಡಳಿತ ನಡೆಸುತ್ತಿದ್ದು, ಒಪ್ಪಂದದ ಪ್ರಕಾರ ಈ ಬಾರಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ಸಿಗುತ್ತಿದೆ. 

ಹೀಗಾಗಿ, ಜೆಡಿಎಸ್‍ನಲ್ಲಿ ಬಿರುಸಿನ ರಾಜಕೀಯ ಶುರುವಾಗಿದೆ. ಆದರೆ ಆರಂಭದಲ್ಲೆ ನನಗೂ ಇದಕ್ಕೂ ಸಂಬಂಧ ಇಲ್ಲ. ಪಕ್ಷ ಹೇಳಿದವರಿಗೆ ನಾನು ನನ್ನ ಮತ ಹಾಕಿ ಬರುತ್ತೇನೆ ಅಷ್ಟೇ ಎಂದು ಜಿಟಿಡಿ ಹೇಳಿದ್ದು, ಈ ಹೇಳಿಕೆ ಜಿಟಿಡಿ, ಬೆಂಬಲಿಗ ಪಾಲಿಕೆ ಸದಸ್ಯರಲ್ಲಿ ಆತಂಕ ಸೃಷ್ಟಿಸಿದೆ.

ನಾನು ಉಸ್ತುವಾರಿ ಸಚಿವನಾಗಿರಲಿ, ಮತದಾರನಾಗಿರಲಿ, ಯಾವತ್ತೂ ಅವರು ನನ್ನನ್ನು ಮೇಯರ್ ಚುನಾವಣೆಯಲ್ಲಿ ಪರಿಗಣಿಸಿಲ್ಲ. ಹಾಗಾಗಿ ಈಗಲೂ ಅವರೇ ಚುನಾವಣೆ ಮಾಡಲಿ. ಪಕ್ಷ, ಹೈಕಮಾಂಡ್ ಯಾರನ್ನು ಅಭ್ಯರ್ಥಿ ಮಾಡುತ್ತೋ. ಅವರಿಗೆ ವೋಟ್ ಹಾಕೋದಷ್ಟೇ ನನ್ನ ಕೆಲಸ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!