ರಾಜಕೀಯ

'ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ'

Shilpa D

ಬೆಂಗಳೂರು:  ಯೇಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರು ಶಿಲಾನ್ಯಾಸ ಮಾಡಿದ್ದು, ಈಗ ವಾಕ್ಸಮರಕ್ಕೆ ಕಾರಣವಾಗಿದೆ

ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರೂ ಟ್ವೀಟ್ ಮಾಡಿದ್ದು, ನಮ್ಮ ಪ್ರಜಾತಂತ್ರ ವ್ಯವಸ್ಥೆಯ ಭದ್ರಬುನಾದಿಯಾದ ಸಮಾನತೆ ಮತ್ತು ಸರ್ವಧರ್ಮ ಸಹಿಷ್ಣುತೆಯಲ್ಲಿ ನಂಬಿಕೆ ಇಟ್ಟಿರುವವನು ನಾನು. ನನ್ನನ್ನು ಏಳು ಬಾರಿ ಗೆಲ್ಲಿಸಿರುವ ಕನಕಪುರ ಕ್ಷೇತ್ರದಲ್ಲಿ ಎಲ್ಲ ಜಾತಿ, ಧರ್ಮದ ಜನರೂ ಇದ್ದಾರೆ. ಅವರ ಭಾವನೆಗಳನ್ನು ಗೌರವಿಸುವುದು ನನ್ನ ಧರ್ಮ.

ಡಾ. ಬಿ.ಆರ್ ಅಂಬೇಡ್ಕರ್ ಸಾಹೇಬರ ಸಂವಿಧಾನ ಸುಡಲು ಮುಂದಾದ ಅಲ್ಪರಿಂದ ಪಾಠ ಹೇಳಿಸಿಕೊಳ್ಳುವ ಜರೂರತ್ತು ನನಗಿಲ್ಲ ಎಂದು ಡಿ ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಯೇಸು ಪ್ರತಿಮೆಗೆ ಜಾಗ ಕೊಟ್ಟಿರುವುದಷ್ಟೇ ಅಲ್ಲ, ನಾಣು ಸಚಿವನಾಗಿದ್ದಾಗ ಕೆಂಪೇಗೌಡ ಪ್ರಾಧಿಕಾರ ರಚನೆಯಾಗಿದೆ. ಮೆಯೋಹಾಲ್ ನಲ್ಲಿ ಕಚೇರಿ ಸ್ಥಾಪನೆಯಾಗಿ, ಬೆಂಗಳೂರಿನಲ್ಲಿ ಐದು ಎಕರೆ ಜಮೀನು ಮಂಜೂರಾಗಿದೆ. 

ಕೆಂಪೇಗೌಡ ಜಯಂತಿ ಆಚರಣೆ, ತನ್ನಿಮಿತ್ತ ಸರಕಾರಿ ರಜೆ ಘೋಷಣೆ ಮಾಡಿಸಿದ್ದೇನೆ. ಆದಿಚುಂಚನಗಿರಿ ಶ್ರೀ ದಿವಂಗತ ಬಾಲಗಂಗಾಧರನಾಥ ಶ್ರೀಗಳ ಹುಟದಟೂರು ರಾಮನಗರದ ಬಿಡದಿಯ ಬಾಣಂದೂರು ಹಾಗೂ ಸಿದ್ದಗಂಗಾ ಶ್ರೀಗಳಾದ ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ರಾಮನಗರದ ಮಾಗಡಿ ಗ್ರಾಮದ ಪ್ರಗತಿಗೆ ತಲಾ 25 ಕೋಟಿ ರೂ. ನಮ್ಮ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಂಜೂರಾಗಿದೆ. ಹೀಗೆ ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ  ಎಂದು ಟ್ವೀಟ್  ಮಾಡಿದ್ದಾರೆ.

SCROLL FOR NEXT