ಯಡಿಯೂರಪ್ಪ 
ರಾಜಕೀಯ

ಪೌರತ್ವ ಕಾಯ್ದೆ ವಿರೋಧಿಸುವ ಮೂಲಕ ಕಾಂಗ್ರೆಸ್ ಅಮಾನವೀಯವಾಗಿ ವರ್ತಿಸುತ್ತಿದೆ: ಯಡಿಯೂರಪ್ಪ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ವಿಶೇಷ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಯಡಿಯೂರಪ್ಪ ಅವರು, ಪ್ರತಿಪಕ್ಷದ ನಾಯಕರು ಅಜ್ಞಾನ ಮತ್ತು ಮಾಹಿತಿ ಕೊರತೆಯುಳ್ಳವರಾಗಿದ್ದು, ಸತ್ಯಸಂಗತಿಗಳನ್ನು ತಿರುಚಿರುವುದರಿಂದ ಪೌರತ್ವ ಕಾಯ್ದೆ ತಿದ್ದುಪಡಿ ಕುರಿತು ವಿವಾದ ಸೃಷ್ಟಿಯಾಗಿದೆ. ಇದರ ಹಿಂದೆ ವ್ಯವಸ್ಥೆ ಪಿತೂರಿಯಿದೆ ಎಂದು ಹೇಳಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಯಾರ ವಿರೋಧಿಯೂ ಅಲ್ಲ. ಕಾಂಗ್ರೆಸ್ ಪಕ್ಷದ ಅವಧಿಯಲ್ಲಿ ನಾಯಕಿ ಸೋನಿಯಾ ಗಾಂಧಿಯವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರನ್ನೂ ವಿವಾಹವಾಗಿ 12 ವರ್ಷಗಳ ಬಲಿಕ ಪೌರತ್ವ ಅರ್ಜಿ ಸಲ್ಲಿಸಿದ್ದರು. ಅವರಿಗೆ ಪೌರತ್ವ ನೀಡಬೇಕಾದರೆ, ಅವರ ಧರ್ಮ ಯಾವುದು ಎಂದು ಪ್ರಶ್ನಿಸಲಾಯಿತೇ? ವಿಶ್ವದ ಯಾವುದೇ ದೇಶದ ಮುಸ್ಲಿಮರು ಭಾರತದ ಪೌರತ್ವ ಪಡೆಯಬಹುದು. ಆದರೆ, ಪೌರತ್ವ ಕಾಯ್ದೆ ನಿಯಮಾವಳಿಗಳನ್ನು ಪೂರ್ಣಗೊಳಿಸಬೇಕು. ಪಾಕಿಸ್ತಾನ ನಾಗರೀಕರಾದರೂ ಗಾಯಕ ಅದ್ನಾನ್ ಸಾಮಿಗೆ ಪೌರತ್ವ ನೀಡಲಾಯಿತು. ಅವರಿದೆ ಧರ್ಮದ ಆಧಾರದ ಮೇಲೆ ಪೌರತ್ವ ನಿರಾಕರಿಸಲಿಲ್ಲ. ಏಕೆಂದರೆ, ಅವರು ಕಾನೂನು ಬದ್ಧ ನಿಯಮಾವಳಿಗಳನ್ನು ಪೂರೈಸಿದ್ದರು ಎಂದು ತಿಳಿಸಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ದೇಶದ 130 ಕೋಟಿ ಜನರಿಗೆ ಯಾವುದೇ ತೊಂದರೆಯಿಲ್ಲ. ಇದೊಂದು ಮಾನವೀಯತೆಯ ಕಾಯ್ದೆಯಾಗಿದೆ. ಆದರೆ, ಕಾಂಗ್ರೆಸ್ ಮತ್ತು ಕೆಲ ಪ್ರತಿಪಕ್ಷಗಳು ಇದನ್ನು ಸಮಸ್ಯೆಯನ್ನಾಗಿ ಮಾಡಿ ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಈ ಮೂಲಕ ಜಾತಿ ವಿಷ ಬೀಜ ಬಿತ್ತುತ್ತಿವೆ. ಅನಗತ್ಯವಾಗಿ ಕಮ್ಯುನಿಸ್ಟ್ ಮತ್ತು ಕಾಂಗ್ರೆಸ್ ನವರು ದಾರಿ ತಪ್ಪಿಸುತ್ತಿದ್ದಾರೆ. ಲಿಯಾಖತ್ ಒಪ್ಪಂದಿಂದ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ