ಯಡಿಯೂರಪ್ಪ 
ರಾಜಕೀಯ

ಏಸು ವಿವಾದ ಮುಂದುವರೆಸಬೇಡಿ: ಸಚಿವರಿಗೆ ಸಿಎಂ ಯಡಿಯೂರಪ್ಪ ತಾಕೀತು

ಕನಕಪುರ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ಮಾಜಿ ಸಚಿವ ಡಿಕೆ. ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ರಾಜಕೀಯ ಟೀಕೆ ಮಾಡುವುದು ಬೇಡ ಎಂದು ಮುಖ್ಯಮಂತ್ರಿಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಸಲಹೆ ನೀಡಿದ್ದಾರೆ. 

ಬೆಂಗಳೂರು: ಕನಕಪುರ ಕಪಾಲ ಬೆಟ್ಟದಲ್ಲಿ 114 ಅಡಿಯ ಏಸು ಕ್ರಿಸ್ತನ ಪ್ರತಿಮೆ ನಿರ್ಮಿಸುವ ವಿಚಾರದಲ್ಲಿ ಮಾಜಿ ಸಚಿವ ಡಿಕೆ. ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ರಾಜಕೀಯ ಟೀಕೆ ಮಾಡುವುದು ಬೇಡ ಎಂದು ಮುಖ್ಯಮಂತ್ರಿಯಡಿಯೂರಪ್ಪ ಅವರು ತಮ್ಮ ಸಂಪುಟದ ಸಚಿವರಿಗೆ ಸಲಹೆ ನೀಡಿದ್ದಾರೆ. 

ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ ಅವರು, ಮಾಜಿ ಸಚಿವ ಡಿಕೆ.ಶಿವಕುಮಾರ್ ಅವರನ್ನು ಈ ವಿಚಾರದಲ್ಲಿ ಗುರಿಯಾಗಿಸಿಸಿಕೊಂಡು ಟೀಕೆ ಮಾಡುವುದು ಬೇಡ. ಇದರಿಂದ ಒಂದು ಧರ್ಮವನ್ನು ಸಂಪೂರ್ಣವಾಗಿ ಬಿಜೆಪಿಯಿಂದ ದೂರ ಮಾಡಿಕೊಂಡಂತಾಗಲಿದೆ. 

ಜೊತೆಗೆ ಇದು ಪರೋಕ್ಷವಾಗಿ ಡಿಕೆ.ಶಿವಕುಮಾರ್ ಅವರಿಗೆ ನೆರವಾಗುವ ಸಾಧ್ಯತೆಯೂ ಇದೆ. ಹೀಗಾಗಿ ಬಹಿರಂಗಾಗಿ ರಾಜಕೀಯ ಟೀಕೆ ಮಾಡುವ ಬದಲು ಕಾನೂನು ಬಾಹಿರವಾಗಿ ಜಮೀನು ಮಂಜುರಾಗಿದ್ದಾರೆ ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಬಹುದು. ಇದನ್ನು ರಾಜಕೀಯವಾಗಿ ಬಳಸಿಕೊಂಡರೆ, ಅದು ತಿರುಗುಬಾಣವಾಗಬಹುದು ಎಂದು ಹೇಳಿದ್ದಾರೆಂದು ವರದಿಗಳು ತಿಳಿಸಿವೆ. 

ಕನಕಪುರ ತಾಲೂಕಿನ ಹಾರೋಬೆಲೆ ಗ್ರಾಮದ ಕಪಾಲ ಬೆಟ್ಟದಲ್ಲಿ 114 ಅಡಿಯ ಏಕಶಿಲಾ ಏಸುಕ್ರಿಸ್ತನ ಪ್ರತಿಮೆ ನಿರ್ಮಾಣಕ್ಕೆ ಶಿವಕುಮಾರ್ ಡಿ.25ರ ಕ್ರಿಸ್ ಮಸ್ ದಿನ ಶಂಕುಸ್ಥಾಪನೆ ಮಾಡಿದ್ದರು. ಅಲ್ಲದೆ. ಹಿಂದಿನ ಸರ್ಕಾರದಲ್ಲಿ ಸರ್ಕಾರದಿಂದ ಮಂಜೂರು ಮಾಡಲಾಗಿದ್ದ 10 ಎಕರೆ ಜಾಗಕ್ಕೆ ಡಿಕೆಶಿ ಅವರೇ ಹಣ ಪಾವತಿಸಿದ್ದರು. 

ಈ ಬಗ್ಗೆ ಬಿಜೆಪಿ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಇಟಲಿಯಮ್ಮನ ಮೆಚ್ಚಿಸುವ ಸಲುವಾಗಿ ಶಿವಕುಮಾರ್ ಏಸುಕಿಸ್ತನ ಪ್ರತಿಮೆ ನಿರ್ಮಾಣ ಮಾಡಲು ಹೊರಟಿದ್ದಾರೆಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!