ಹಾಸನ/ ಬೆಂಗಳೂರು: ಕಾಂಗ್ರೆಸ್‌ನವರು ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಂದಲೂ ಸ್ಪರ್ಧಿಸಲಿ, ನಾವೇನು ಅವರನ್ನು ಹಿಡಿದಿಟ್ಟುಕೊಂಡಿದ್ದೇವಾ ಎಂದು ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಪ್ರಶ್ನಿಸಿದ್ದಾರೆ
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ''ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ, ಸೋನಿಯಾ, ದಿನೇಶ್ ಗುಂಡೂರಾವ್ ಅವರ ಪಕ್ಷದ ಟಿಕೆಟ್ ಬಗ್ಗೆ ತೀರ್ಮಾನಿಸುತ್ತಾರೆ. ಅವರು ನಿಲ್ಲುವುದು ಬೇಡ ಎನ್ನಲು ನಾವ್ಯಾರು?
ನಮ್ಮ ಪಕ್ಷದಿಂದ ಸ್ಪರ್ದಿಸುತ್ತಾರೆ ಎಂಬುದರ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ನಿರ್ಧರಿಸಲಿದ್ದಾರೆ ಎಂದು ಕಿಡಿಕಾರಿದ್ದಾರೆ.
ತಮ್ಮ ಪುತ್ರ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆ ಬಗ್ಗೆ ನಿರ್ಧರಿಸಿಲು ಕಾಂಗ್ರೆಸ್ ನವರು ಯಾರು? ಹಾಸನದಿಂದ ಪ್ರಜ್ವಲ್ ಸ್ಪರ್ಧಿಸಲು ನಾವು ಕಾಂಗ್ರೆಸ್ ನವರ ಅನುಮತಿ ಪಡೆಯುವ ಅಗತ್ಯವಿಲ್ಲ, ಜೆಡಿಎಸ್ ನಾಯಕರುಗಳ ಸ್ಪರ್ಧೆ ಬಗ್ಗೆ ಹೇಳಲು ಎ.ಮಂಜು ಯಾರು? ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಜೆಡಿಎಸ್ ವರಿಷ್ಠರು ಎಲ್ಲಾ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.