ಸಿದ್ದರಾಮಯ್ಯ 
ರಾಜಕೀಯ

ಜೆಡಿಎಸ್ ನಿಂದ ಕಾಂಗ್ರೆಸ್ ನಾಯಕರಿಗೆ ಅವಮಾನವಾಗುತ್ತಿದೆ: ರಾಹುಲ್ ಗೆ ಸಿದ್ದರಾಮಯ್ಯ ದೂರು

ಕಾಂಗ್ರೆಸ್-ಜೆಡಿಎಸ್ ಪಕ್ಷದೊಳಗಿನ ವಾದ-ವಿವಾದ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ಮುಟ್ಟಿದೆ....

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಪಕ್ಷದೊಳಗಿನ ವಾದ-ವಿವಾದ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳ ಮುಟ್ಟಿದೆ. ಜೆಡಿಎಸ್ ನಾಯಕರಿಂದ ನಮಗೆ ಅವಮಾನವಾಗುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರೇ ಜೆಡಿಎಸ್ ವಿರುದ್ಧ ದೂರು ನೀಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ನೀಡಿರುವ ಸಂದೇಶ; ಮೈತ್ರಿ ಘರ್ಷಣೆ ಅಳವಡಿಸಿಕೊಳ್ಳಬೇಡಿ, ಮೈತ್ರಿ ಧರ್ಮ ಪಾಲಿಸಿ ಎಂಬುದು. ಲೋಕಸಭೆ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಗೆ ಸಮ್ಮಿಶ್ರ ಸರ್ಕಾರವೆಂಬ ದೋಣಿಯನ್ನು ಮುಳುಗಿಸುವುದು ಸುತಾರಾಂ ಇಚ್ಛೆಯಿದ್ದಂತಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮೈತ್ರಿ ಮುಂದುವರಿಸಿಕೊಂಡು ಹೋಗುವುದೇ ಉತ್ತಮ ಎಂದು ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಸಮಾಧಾನದ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ.

ಮೊನ್ನೆ ಬುಧವಾರ ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಪ್ರಸ್ತುತ ರಾಜ್ಯದಲ್ಲಿನ ಬೆಳವಣಿಗೆಗಳನ್ನು ವಿವರಿಸಿದ್ದಲ್ಲದೆ ಎರಡೂ ಪಕ್ಷಗಳ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ತಿಳಿಸಿದ್ದಾರೆ. ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿಯವರಿಗೆ ರಾಹುಲ್ ಗಾಂಧಿಯಿಂದ ಬುಲಾವ್ ಬಂದಿತ್ತು ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ನಾಯಕರ ವರ್ತನೆ ಮತ್ತು ಹೇಳಿಕೆಗಳಿಂದ ಅವಮಾನ ಎದುರಿಸಬೇಕಾಗಿದೆ. ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ನಿರ್ಲಕ್ಷಿತಕ್ಕೊಳಗಾಗುತ್ತಿದ್ದಾರೆ, ಅಲ್ಲದೆ ಕಾಂಗ್ರೆಸ್ ನಾಯಕರು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುವಂತೆ ಜೆಡಿಎಸ್ ನವರೇ ಕೆರಳಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿಯವರಿಗೆ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ.

ತಮ್ಮ ಪಕ್ಷದ ಶಾಸಕರನ್ನು ಸಮರ್ಥಿಸಿಕೊಂಡಿರುವ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಅಥವಾ ಸರ್ಕಾರದ ವಿರುದ್ಧ ಶಾಸಕರು ಮಾತನಾಡುತ್ತಿಲ್ಲ. ತಮ್ಮ ಕ್ಷೇತ್ರಗಳಲ್ಲಿ ನಿರೀಕ್ಷಿತ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಮತ್ತು ಅನುದಾನ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ ಎಂದು ಹೇಳಿದ್ದಾರಷ್ಟೆ ಎಂದು ತಿಳಿದುಬಂದಿದೆ.

ಇದಕ್ಕೆ ರಾಹುಲ್ ಗಾಂಧಿ, ಮೈತ್ರಿ ಧರ್ಮಕ್ಕೆ ಧಕ್ಕೆ ತರುವಂತಹ ಯಾವುದೇ ಹೇಳಿಕೆಗಳನ್ನು ನೀಡದಂತೆ ಶಾಸಕರಿಗೆ ತಿಳಿಹೇಳುವಂತೆ ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ. ನಿನ್ನೆ ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿಯವರ ಮಾರ್ಗದರ್ಶನದಂತೆ ಜೆಡಿಎಸ್ ನಾಯಕರೊಂದಿಗೆ ಒಗ್ಗೂಡಿ ಕೆಲಸ ಮಾಡುವ ಅಗತ್ಯವಿದೆ ಎಂದು ಸಿದ್ದರಾಮಯ್ಯನವರು ಶಾಸಕರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!