ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಮಂಡ್ಯ ಕಾಂಗ್ರೆಸ್ ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ ಸ್ಪಷ್ಟನೆ

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ...

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಕ್ಷದ ಭದ್ರಕೋಟೆ.  ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಕೆಲ ದಿನಗಳಿಂದ ಮಂಡ್ಯ ಕ್ಷೇತ್ರದಿಂದ ನಿಖಿಲ್  ಹಾಗೂ ಅಂಬರೀಷ್ ಕುಟುಂಬದ ಸದಸ್ಯರು ಸ್ಪರ್ಧಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದರೆ ಸುಮಲತಾ ಅಂಬರೀಶ್ ಜೆಡಿಎಸ್ ಪಕ್ಷಕ್ಕೆ ಸೇರಿದವರಲ್ಲ ಎಂದರು. ಹಾಗೊಂದು ವೇಳೆ  ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಅದಕ್ಕೆ ತಮ್ಮ ವಿರೋಧವಿಲ್ಲ. ಸ್ಪರ್ಧೆ ಮಾಡುವುದು ಅವರ ವೈಯಕ್ತಿಕ ನಿರ್ಧಾರ ಎಂದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಜೊತೆ ಕ್ಷೇತ್ರ ಹೊಂದಾಣಿಕೆ ಸಾಧ್ಯವಾಗದೇ ಇದ್ದರೆ ಅಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಬಹುದು. ದೇವೇಗೌಡ ಅವರೇ ಹೇಳಿರುವಂತೆ ಪ್ರಜ್ವಲ್ ರೇವಣ್ಣ ಹಾಸನಿಂದ ಸ್ಪರ್ಧಿಸುತ್ತಾರೆ. ಉಳಿದಂತೆ ಬೇರೆ ಕ್ಷೇತ್ರಗಳ ಸ್ಪರ್ಧೆಯ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ; ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ; ರೂಪಾಯಿ ಮೌಲ್ಯ, Sensex ಇಳಿಕೆ

SCROLL FOR NEXT