ಬೆಂಗಳೂರು: ಕಾಂಗ್ರೆಸ್ ಶಾಸಕರಲ್ಲಿ ಯಾವುದೇ ಅಸಮಾಧಾನವಿಲ್ಲ, ಯಾರೋಬ್ಬರು ಪಕ್ಷ ಬಿಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಗೆ ಕಾಂಗ್ರೆಸ್ ನಾಲ್ಕು ಶಾಸಕರು ಸಭೆಗೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರಾದ ರಮೇಶ್ ಜಾರಕಿಹೊಳಿ,ಅಶೋಕ್ ಕುಮಟಳ್ಳಿ, ಉಮೇಶ್ ಜಾಧವ್ ಮತ್ತು ನಾಗೇಂದ್ರ ಅವರಿಗೆ ನೋಟೀಸ್ ನೀಡಲಾಗಿತ್ತು.
ಖುದ್ದು ಹಾಜರಿಗೆ ಶಾಸಕರಿಗೆ ಸೂಚಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ಮುಂದಿನವಾರ ನಡೆಯುವ ಬಜೆಟ್ ಅಧಿವೇಶನಕ್ಕೆ ತಮ್ಮ ಪಕ್ಷದ ಎಲ್ಲಾ ಶಾಸಕರು ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ,
ಬಿಜೆಪಿ ತಮ್ಮ ಪಕ್ಷದ ಶಾಸಕರಿಗೆ 50 ಕೋಟಿ ರೂ ಆಫರ್ ನೀಡಿತ್ತು, ಅವರ ಆಫರ್ ಅನ್ನು ನಮ್ಮ ಶಾಸಕರು ನಿರಾಕರಿಸಿದ್ದಾರೆ, ಹೀಗಾಗಿ ಯಾರೋಬ್ಬರು ಪಕ್ಷ ಬಿಡುತ್ತಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡ ಕೇಳಿ ಬರುತ್ತಿದೆ ಎಂದು ಹೇಳಿರುವ ಸಿದ್ದರಾಮಯ್ಯ, ಲೋಕಸಭೆ ಚುನಾವಣೆ ಸೀಟು ಹಂಚಿಕೆ ಸಂಬಂಧ ಜೆಡಿಎಸ್ ಜೊತೆ ಇನ್ನೂ ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics