ರಾಜಕೀಯ

ಉಮೇಶ್ ಜಾಧವ್ ಗೆ ನೀಡಿದ್ದ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನ ವಾಪಸ್ ಪಡೆದ ಸರ್ಕಾರ

Raghavendra Adiga
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ನ ಅತೃಪ್ತ ಶಾಸಕರನ್ನು ನಿಯಂತ್ರಿಸಲು ತಯಾರಾಗಿರುವ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಕಾಂಗ್ರೆಸ್ ನ ಉಮೇಶ್ ಜಾಧವ್ ಅವರನ್ನು ಉಗ್ರಾಣ ನಿಗಮ ಅಧ್ಯಕ್ಷರಾಗಿ ನೇಮಕಾತಿ ಮಾಡಿದ್ದ ಆದೇಶವನ್ನು ಹಿಂತೆಗೆದುಕೊಂಡಿದೆ.
ಉಮೇಶ್ ಜಾಧವ್ ಕಾಂಗ್ರೆಸ್ ಭಿನ್ನಮತೀಯ ಶಾಸಕರಾಗಿದ್ದು ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದರು.ಅಲ್ಲದೆ ಉಮೇಶ್ ಅವರು ಬಿಜೆಪಿ ನಾಯಕರ ನಿರಂತರ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನಲೆಯಲ್ಲಿ ಉಗ್ರಾಣ ನಿಗಮ ಅಧ್ಯಕ್ಷ ಸ್ಥಾನಕ್ಕೆ ಅವರನ್ನು ನೇಮಕಾತಿ ಮಾಡಿದ್ದ ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿದೆ. ಉಮೇಶ್ ಜಾಧವ್ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಇನ್ನೂ ಅಧಿಕಾರ ವಹಿಸಿಕೊಂಡಿರಲಿಲ್ಲ.
ಉಮೇಶ್ ಅವರಿಂದ ತೆರವಾದ ಸ್ಥಾನಕ್ಕೆ ರಾಯಚೂರು ಜಿಲ್ಲೆ ಮಸ್ಲಿನ್ ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ಅವರನ್ನು ನೇಮಿಸಲಾಗಿದೆ.
ಇದೇ ವೇಳೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿಮೂವರನ್ನು  ನಿಗಮ ಮತ್ತು ಮಂಡಳಿಗಳಿಗೆ ಹೊಸದಾಗಿ ನೇಮಕ ಮಾಡಿ ಆದೇಶಿಸಿದ್ದಾರೆ.  ಪ್ರತಾಪ್​ ಗೌಡ ಪಾಟೀಲ್ ಉಗ್ರಾಣ ನಿಗಮ, ಸವನಗೌಡ ದದ್ದಲ್​ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಸಹಿತ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಶಾಸಕ ಎಂ.ಎ ಗೋಪಾಲಸ್ವಾಮಿ ಅವರಿಗೆ  ಸಂಪುಟ ದರ್ಜೆ ಸ್ಥಾನದೊಡನೆ ಲಸಂಪನ್ಮೂಲ ಸಚಿವರ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
SCROLL FOR NEXT