ಬರೀ ನಾಲ್ಕು ಮಂದಿಯಲ್ಲ 40 ಶಾಸಕರು ರಾಜಿನಾಮೆ ನೀಡಿದರೂ ಸ್ವೀಕರಿಸುವೆ: ಸ್ಪೀಕರ್
ಕೇವಲ ನಾಲ್ಕುಮಂದಿ ಮಾತ್ರವಲ್ಲ ಒಂದು ವೇಳೆ 40 ಶಾಸಕರು ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ಕೊಟ್ಟರೂ ತೆಗೆದುಕೊಳ್ಳುತ್ತೇನೆ ಎಂದು ಸ್ಪೀಕರ್ ...
ಬೆಂಗಳೂರು: ಕೇವಲ ನಾಲ್ಕುಮಂದಿ ಮಾತ್ರವಲ್ಲ ಒಂದು ವೇಳೆ 40 ಶಾಸಕರು ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ಕೊಟ್ಟರೂ ತೆಗೆದುಕೊಳ್ಳುತ್ತೇನೆ ಎಂದು ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹೇಳಿದ್ದಾರೆ.
ಕೋಲಾರದ ಶ್ರೀನಿವಾಸಪುರ ತಾಲೂಕಿನ ಜನ್ನಪ್ಪನಹಳ್ಳಿ ಗ್ರಾಮದಲ್ಲಿ ಗಣೇಶನ ಮೂರ್ತಿ ಹಾಗೂ ಪುಷ್ಕರಣಿ ಉದ್ಗಾಟಿಸಿ ಮಾತನಾಡಿದ ರಮೇಶ್ ಕುಮಾರ್ , ಶಾಸಕರು ರಾಜೀನಾಮೆ ನೀಡುವ ವಿಚಾರ ನನಗೇನು ಗೊತ್ತಿಲ್ಲ. ಅಧಿವೇಶನದಲ್ಲಿ ಗೈರಾದ ಶಾಸಕರ ಮೇಲೆ ಕ್ರಮಕೈಗೊಳ್ಳಲು ನಾನು ಯಾರು? ನಾಲ್ಕು ಅಲ್ಲ ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೂ ನಾನು ತೆಗೆದುಕೊಳ್ಳಲು ಸಿದ್ಧವೆಂದು ಪರೋಕ್ಷವಾಗಿ ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ಸಿನ ಶಾಸಕ ಕಂಪ್ಲಿ ಗಣೇಶ್ ಬಗ್ಗೆ ಪ್ರತಿಕ್ರಿಯಿಸಿ, ಗಣೇಶ್ ಅವರನ್ನು ಬಂಧಿಸುವಂತೆ ಸೂಚನೆ ನೀಡಲು ನಾನು ಪೊಲೀಸ್ ಇಲಾಖೆಯ ಅಧಿಕಾರಿಯೇ? ನನಗೆ ಹೇಗೆ ಗೊತ್ತಿರುತ್ತದೆ ಅವರ ಬಗ್ಗೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.