ಸಂಗ್ರಹ ಚಿತ್ರ 
ರಾಜಕೀಯ

ಬಜೆಟ್ ಮಂಡನೆಗೆ ಕ್ಷಣಗಣನೆಗೂ ಮುನ್ನ ಕಾಂಗ್ರೆಸ್ ಶಾಸಕಾಂಗ ಸಭೆ, ಶಾಸಕರ ಕಡ್ಡಾಯ ಹಾಜರಾತಿಗೆ ವಿಪ್ ಜಾರಿ!

ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ 2ನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಬಂಡಾಯ ನಾಯಕರ ಬಿಸಿ ಕೂಡ ಸರ್ಕಾರಕ್ಕೆ ಮುಟ್ಟುತ್ತಿದ್ದು, ಇದೇ ಕಾರಣಕ್ಕೆ ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಪಕ್ಷದ ತನ್ನ ಶಾಸಕಾಂಗ ಸಭೆ ಕರೆದಿದೆ.

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ 2ನೇ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಬಂಡಾಯ ನಾಯಕರ ಬಿಸಿ ಕೂಡ ಸರ್ಕಾರಕ್ಕೆ ಮುಟ್ಟುತ್ತಿದ್ದು, ಇದೇ ಕಾರಣಕ್ಕೆ ಬಜೆಟ್ ಮಂಡನೆಗೂ ಮುನ್ನ ಕಾಂಗ್ರೆಸ್ ಪಕ್ಷದ ತನ್ನ ಶಾಸಕಾಂಗ ಸಭೆ ಕರೆದಿದೆ.
ಮಾಜಿ ಸಿಎಂ ಹಾಗೂ ದೋಸ್ತಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಾಸಕಾಂಗ ಸಭೆ ಕರೆಯಲಾಗಿದ್ದು, ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲು ಮುಂದಾಗಿದೆ ಎಂದು ತಿಳಿದುಬಂದಿದೆ. 
ಇಂದು ಸಿಎಲ್​​​ಪಿ ಸಭೆ ನಡೆಯಲಿದ್ದು, ಎಲ್ಲಾ ಕಾಂಗ್ರೆಸ್​ ಶಾಸಕರು ಕಡ್ಡಯವಾಗಿ ಹಾಜರಾಗಲೇಬೇಕು. ಇಲ್ಲವಾದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಖಡಕ್​​​ ಸಂದೇಶ ರವಾನಿಸಿದ್ದಾರೆ. ಸತತವಾಗಿ ಸಿಎಲ್​​​ಪಿ ಸಭೆಗೆ ಅತೃಪ್ತ ಶಾಸಕರು ಗೈರಾಗುತ್ತಿದ್ದರು. ಕೆಲ ಶಾಸಕರ ಈ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಈ ಶಾಸಕರಿಗೆ ಬಿಸಿ ಮುಟ್ಟಿಸುವ ಸಲುವಾಗಿಯೇ ಸಿದ್ದರಾಮಯ್ಯನವರು ಮತ್ತೊಮ್ಮೆ ಶಾಸಕಾಂಗ ಸಭೆ ಕರೆದಿದ್ದು, ಈ ಬಾರಿಯೂ ಸಭೆಗೆ ಹಾಜರಾಗದೇ ಹೋದರೇ ಶಾಸಕರಿಗೆ ವಿಪ್​​ ಜಾರಿ ಮಾಡಲು ನಿರ್ಧರಿಸಿದ್ಧಾರೆ ಎನ್ನಲಾಗಿದೆ.
ಇಂದು ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರದ ಬಜೆಟ್​​ ಮಂಡನೆ ನಡೆಯಲಿದೆ. ಸಿಎಂ ಎಚ್​​.ಡಿ ಕುಮಾರಸ್ವಾಮಿಯವರೇ ಬಜೆಟ್​ ಮಂಡಿಸಲಿದ್ದು, ಹಲವು ಜನಪ್ರಿಯ ಯೋಜನೆ ಘೋಷಿಸುವ ಸಾಧ್ಯತೆಯಿದೆ. ಈ ಮುನ್ನವೇ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪರೇಷನ್​​ ಕಮಲ ಸೇರಿದಂತೆ ಹಲವು ವಿಚಾರಗಳನ್ನು ಇಲ್ಲಿ ಚರ್ಚಿಸಲಿದ್ದಾರೆ. ಒಂದು ವೇಳೆ ಈ ಬಾರಿ ಯಾರೇ ಶಾಸಕರು ಗೈರಾದರು, ಅವರ ವಿರುದ್ಧ ವಿಪ್​​ ಜಾರಿಗೊಳಿಸುವುದಾಗಿ ಖಡಕ್​​ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT