ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ 
ರಾಜಕೀಯ

ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ರೆಬೆಲ್ ಶಾಸಕರ ವಿರುದ್ಧ 'ಪಕ್ಷಾಂತರ ಕಾಯ್ದೆಯಡಿ ದೂರು ದಾಖಲು

ನಿರೀಕ್ಷೆಯಂತೆಯೇ ಇಂದಿನ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ರೆಬೆಲ್ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅಧಿಕೃತವಾಗಿ ದೂರು ನೀಡಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ನಿರೀಕ್ಷೆಯಂತೆಯೇ ಇಂದಿನ ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾದ ರೆಬೆಲ್ ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಪಕ್ಷ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅಧಿಕೃತವಾಗಿ ದೂರು ನೀಡಿದೆ ಎಂದು ತಿಳಿದುಬಂದಿದೆ.
ಈ ಹಿಂದೆಯೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶಾಸಕರಿಗೆ ವಿಪ್‌ ಜಾರಿಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಹಾಗೂ ರಾಯಚೂರು ಶಾಸಕ ಬಸನಗೌಡ ಪಾಟೀಲ್ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದಾರೆ. ಅಂತೆಯೇ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣ ಬಳಿಕ ಕಾಂಗ್ರೆಸ್ ನಿಂದ ಅಮಾನತುಗೊಂಡಿರುವ ಶಾಸಕ ಇನ್ನೂ ನಾಪತ್ತೆಯಾಗಿದ್ದು ಅವರನ್ನು ಹೊರತು ಪಡಿಸಿ ಬಿಸಿ ಪಾಟೀಲ್ ಮಧ್ಯಾಹ್ನ ಬರುವುದಾಗಿ ಹೇಳಿದ್ದಾರೆ. 
ಹೀಗಾಗಿ ಇಂದು ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗಿರುವ ನಾಲ್ಕು ಮಂದಿ ಶಾಸಕರ ವಿರುದ್ಧ ಪಕ್ಷಾಂತರ ನಿಷೇಧ ಕಾಯ್ದೆಯಡಿ ಕ್ರಮಜರಿಗಿಸುವಂತೆ ಸ್ಪೀಕರ್‌ಗೆ ದೂರು ನೀಡಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ್, ಬಿ.ನಾಗೇಂದ್ರ ವಿರುದ್ಧ ದೂರು ದಾಖಲಾಗುವ ಸಾಧ್ಯತೆ ಇದೆ. 
ಈ ಬಗ್ಗೆ ಮಾಹಿತಿ ನೀಡಿದ ಸಿದ್ದರಾಮಯ್ಯ ಅವರು, 'ಮಾಜಿ ಸಚಿವ ರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ್, ಬಿ.ನಾಗೇಂದ್ರ ಸಭೆಗೆ ಬಂದಿಲ್ಲ. ಕಂಪ್ಲಿ ಶಾಸಕ ಜೆ.ಎನ್. ಗಣೇಶ ಅವರೂ ಕೂಡ ಸಭೆಗೆ ಬಂದಿಲ್ಲ. ಆದರೆ ಅವರ ಜತೆ ಗಣೇಶ್ ಇಲ್ಲ. ನಾಲ್ವರು ಅತೃಪ್ತರು ಹಾಜರಾಗಲು ಸಾಧ್ಯವಾಗದಿರಲು ಕಾರಣ ನೀಡಿ ಪತ್ರ ಬರೆದಿದ್ದಾರೆ. ಫೆ.15ರವರೆಗೆ ಬರಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ, ಅವರಿಗೆ ಈಗಾಗಲೇ ಸಾಕಷ್ಟು ಅವಕಾಶ ನೀಡಲಾಗಿದೆ.  ಎಲ್ಲ ಶಾಸಕರಿಗೂ ಸದನದಲ್ಲಿ ಪಾಲ್ಗೊಳ್ಳುವಂತೆ ವ್ಹಿಪ್ ಜಾರಿ ಮಾಡಲಾಗಿತ್ತು. ಅಧಿವೇಶನ ಮುಗಿಯುವರೆಗೂ ಬರುವುದಿಲ್ಲ ಎಂದು ನಾಲ್ವರು ಪತ್ರದಲ್ಲಿ ತಿಳಿಸಿದ್ದಾರೆ. ನಾಲ್ವರು ಅತೃಪ್ತರ ವಿರುದ್ದ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ಇದು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಕೈಗೊಂಡ ನಿರ್ಣಯ. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸಂಜೆಯೊಳಗೆ ಸಭಾಧ್ಯಕ್ಷರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. 
'ಜೆ.ಎನ್.ಗಣೇಶ ಪಾಪ ಸಿಕ್ಕಾಕಿಕೊಂಡು ಬರಲಿಕ್ಕೆ ಆಗ್ತಿಲ್ಲಾ. ಯಾರ ವಿರುದ್ಧ ಕ್ರಮ ಕೈಗೊಳ್ಳುವ ಮೊದಲು ಸಹಜ ನ್ಯಾಯ ನೋಡಬೇಕು. ಆ ಪ್ರಕಾರ ಅವಕಾಶ ಕೊಡಬೇಕು. ಹೀಗಾಗಿ ಅವರಿಗೆ ಅವಕಾಶ ನೀಡಲಾಗಿದೆ‌' ಎಂದು ಹೇಳಿದರು. ಶಾಸಕರಿಗೆ ಆಮಿಷ ಒಡ್ಡಿದೆ ಎನ್ನಲಾದ ಆಡಿಯೊ ಫೇಕ್ ಎನ್ನುವುದು ಯಡಿಯೂರಪ್ಪ ಹೇಳಿದ್ದೊ ಅಥವಾ ಮಿಮಿಕ್ರಿಯೊ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ಹಿಂದೆ ಕೂಡ ಅನಂತಕುಮಾರ್ ಆಡಿಯೊ ಬಯಲಾಗಿತ್ತು. ತನಿಖೆಯಿಂದ ಸಾಬೀತಾಗಿತ್ತು. ನಾವೇ ಕ್ರಮ ಕೈಗೊಂಡಿರಲಿಲ್ಲ. ಯಡಿಯೂರಪ್ಪ ಬಣ್ಣ ಸಂಪೂರ್ಣ ಬಯಲಾಗಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT